Advertisement

Ramanagara; ಅತ್ತೆಗೆ ಮನಸೋ ಇಚ್ಛೆ ಹೊಡೆದ ಸೊಸೆ:ವಿಡಿಯೋ ವೈರಲ್

10:57 PM Sep 02, 2024 | Team Udayavani |

ರಾಮನಗರ: ಚನ್ನಪಟ್ಟಣ ತಾಲೂಕಿನ ಅಬ್ಬೂರುದೊಡ್ಡಿ ಗ್ರಾಮದಲ್ಲಿ ಸೊಸೆಯೊಬ್ಬಳು ಅತ್ತೆಯನ್ನು ಮನೆ ಬಿಟ್ಟು ಹೋಗುವಂತೆ ಹೇಳುತ್ತ ಮನಸೋ ಇಚ್ಛೆ ಹೊಡೆಯುತ್ತಿರುವ ವೀಡಿಯೋ ವೈರಲ್‌ ಆಗಿದೆ. ತಾಯಿಯ ಮೇಲೆ ಪತ್ನಿ ಹಲ್ಲೆ ಮಾಡುತ್ತಿದ್ದರೆ ಅದನ್ನು ತಪ್ಪಿಸಬೇಕಾದ ಮಗನೇ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎಂದು ಸಂಬಂಧಿ ಕರು ತಿಳಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣ ಗಳಲ್ಲಿ ವೀಡಿಯೋ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸೊಸೆ ಸಂಜನಾ ಮತ್ತು ಮಗ ರವೀಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂಜನಾ ಮತ್ತು ರವೀಂದ್ರ ತಲೆ ಮರೆಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next