Advertisement
ನನ್ನನ್ನು ಸರ್ವನಾಶ ಮಾಡಲು ಪ್ರತೀ ನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ ಎಂದು ಶಿವಕುಮಾರ್ ಸವಾಲು ಹಾಕಿದ್ದಾರೆ.
ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ನಮ್ಮ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿ ಒಪ್ರಿದ್ದಾರೆ ಎಂದು ಶಿವಕುಮಾರ್ ಹೇಳಿದರು.
Related Articles
ನಾನು ಬೆಂಗಳೂರು ಜಿ.ಪಂ. ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ . ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು.ಇದು ನಮ್ಮ ಜಿಲ್ಲೆ.
Advertisement
ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಬೆಂಗಳೂರು ಹೆಸರನ್ನುಏಕೆ ಕಳೆದುಕೊಳ್ಳಬೇಕು?ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಏಕೆ ಕಳೆದುಕೊಳ್ಳಬೇಕು? ಎಂದು ಪ್ರಶ್ನಿಸಿದರು.