ರಾಮನಗರ: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು ಬಾಲಕಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷವೊಂದು ಈ ಕುಕ್ಕರ್ ನೀಡಿತ್ತು ಎನ್ನಲಾಗಿದೆ.
Advertisement
ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದ ಮಹಾಲಕ್ಷ್ಮಿ (17) ಗಾಯಾಳು ಬಾಲಕಿ. ಇಂದು ಬೆಳಿಗ್ಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಟೋಟಗೊಂಡಿದೆ.
ಇದನ್ನೂ ಓದಿ:Watch Viral Video: ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್
ಬಾಲಕಿಗೆ ಮುಖದ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆಕೆಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗಿದೆ.