Advertisement

ರಾಮನಗರ : ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ

07:08 PM Jun 04, 2021 | Team Udayavani |

ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.

Advertisement

ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.

ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರಕಾರ ತಕ್ಷಣವೇ ಪ್ರಕಟಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಬೆಂಗಳೂರಿನಲ್ಲಿ ಪ್ರಕಟಿಸಿದರು.

ಇದನ್ನೂ ಓದಿ :ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next