Advertisement

ಗ್ರಾಮೀಣ ಭಾಗದಲ್ಲಿ ಕೊರೊನಾ ಜಾಗೃತಿ

04:33 PM Mar 19, 2020 | Team Udayavani |

ರಾಮನಗರ: ಕೊರನಾ ವೈರಸ್‌ ಸೋಂಕು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಗ್ರಾಮೀಣ ಪ್ರದೇಶದ ನಾಗರಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ಗ್ರಾಮ ಪಂಚಾಯ್ತಿಗೆ ಅಧಿಕಾರಿಗಳ ತಂಡ ರಚನೆಯಾಗಿದೆ.

Advertisement

ಈ ಪ್ರಯುಕ್ತ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒ ಮತ್ತು ಸರ್ಕಾರಿ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಅಧ್ಯಕ್ಷ ಗಾಣಕಲ್‌ ನಟರಾಜ್‌ ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಯೊಬ್ಬರ ನೇತೃತ್ವದಲ್ಲಿ 28 ಗ್ರಾಮ ಪಂಚಾಯ್ತಿಗಳಲ್ಲೂ ತಂಡ ರಚಿಸಿಕೊಂಡು ಜಾಗೃತಿ ಅಭಿಯಾನ ಆರಂಭಿಸಿ ಎಂದು ಸೂಚಿಸಿದರು. ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮೂಲಕ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಕೊಟ್ಟರು. ಆರೋಗ್ಯ ಇಲಾಖೆಯ ಅಧಿಕಾರಿ ವಿನಯ್‌, ತಾಪಂ ಇಒ ಶಿವಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಶಶಿಕಲಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next