Advertisement

Ramanagara: ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಆವರಣಕ್ಕೆ ನುಗ್ಗಿದ ಪೋಲಿಸ್ ಜೀಪ್

06:42 PM Feb 13, 2024 | Team Udayavani |

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪೊಂದು ದೇವಸ್ಥಾನದ ಆವರಣಕ್ಕೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

Advertisement

ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪೊಲೀಸ್ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ರಾಮದೇವರ ದೇವಸ್ಥಾನಕ್ಕೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜೀಪಿನಲ್ಲಿ ಕೋಲಾರ ಡಿವೈಎಸ್ಪಿ ರಮೇಶ್ ಸಂಚರಿಸುತ್ತಿದ್ದರು. ಕ್ರೇನ್ ಮೂಲಕ ಬುಲೋರೊ ಜೀಪ್ ತೆಗೆಸಲಾಯಿತು. ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next