Advertisement

Ramanagara: ಏಳು ಕೋತಿಗಳನ್ನು ಹತ್ಯೆಗೈದು ಚೀಲದಲ್ಲಿ ಕಟ್ಟಿ ಬಿಸಾಡಿದರು

11:37 PM Oct 29, 2023 | |

ರಾಮನಗರ: ತೆಂಗಿನ ಫಸಲು ನಾಶ ಮಾಡುತ್ತವೆ ಎಂಬ ಕಾರಣಕ್ಕೆ ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ಕಟ್ಟಿ ಬಿಸಾಡಿರುವ ಅಮಾನವೀಯ ಘಟನೆ ಯಲಚವಾಡಿ ಬಳಿಯ ವಾಸ ಪಟ್ಟಣದಲ್ಲಿ ನಡೆದಿದೆ.

Advertisement

ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಯ ಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಅ ನುಮಾನಾಸ್ಪದವಾಗಿ ಬಿದ್ದಿದ್ದ ಚೀಲವನ್ನು ತೆಗೆದು ನೋಡಿದಾಗ ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕೋತಿಗಳು ಸಾಮಾನ್ಯವಾಗಿ ತೆಂಗಿನ ಮರದಲ್ಲಿ ಎಳನೀರು ಸೀಬೆಕಾಯಿ ಕಡಲೆಕಾಯಿ ಇತ್ಯಾದಿ ಕೃಷಿ ಬೆಳೆಗಳ ಮೇಲು ದಾಳಿ ಮಾಡುತ್ತವೆ ಇದೇ ಕಾರಣಕ್ಕೆ ಕೋತಿಗಳ ಉಪಟಳ ದಿಂದ ಬೇಸತ್ತ ಕಿಡಿಗೇಡಿಗಳು ಕೋತಿ ಮರಿಗಳನ್ನ ಸಾಯಿಸಿ ತಂದು ಹಾಕಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕೋತಿ ಮರಿ ಸೇರಿ ಒಟ್ಟು ಏಳು ಕೋತಿಗಳನ್ನು ಸಾವನ್ನಪ್ಪಿದ್ದು ಕೋತಿಯ ಕುತ್ತಿಗೆ ಭಾಗದಲ್ಲಿ ರಕ್ತದ ಕಲೆ ಇರುವುದು ಕಂಡು ಬಂದಿದೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಮಾಧ್ಯಮಗಳು ಮಾಹಿತಿ ನೀಡಿದರು ಸ್ಥಳಕ್ಕೆ ಬಂದು ಏನಾಗಿದೆ ಎಂದು ಪರಿಶೀಲನೆ ಮಾಡುವ ಸೌಜನ್ಯವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳೀಯರು ಮೃತಪಟ್ಟಿರುವ ಏಳು ಕೋತಿಗಳನ್ನು ಪೂಜಿ ಸಲ್ಲಿಸಿ ರಸ್ತೆ ಪಕ್ಕದಲ್ಲಿ ಅಂತ ಸಂಸ್ಕಾರ ಮಾಡಿದ್ದಾರೆ. ಮಂಗಗಳು ವನ್ಯಜೀವಿ ರಕ್ಷಣೆ ಕಾಯ್ದೆ 1972ರ ಸಂರಕ್ಷಿತ ಕಾಯ್ದೆ ಅಡಿಯಲ್ಲಿದ್ದರೂ ಇದು ನಮ್ಮ ವ್ಯಾಪ್ತಿಗೆ ಬರೋದಿಲ್ಲ ಎಂದು ವನ್ಯಜೀವಿ ವಲಯ ಅರಣ್ಯ ಅಧಿಕಾರಿಗಳು ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಜವಾಬ್ದಾರಿ ಹಾಕಿದ್ದಾರೆ. ಹಾಗಾದ್ರೆ ಕೋತಿಗಳನ್ನು ಸಾವಿಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಗಳ ಸಾವಿಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next