Advertisement

Ramanagara; ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐವರಿಗೆ ಗಂಭೀರ ಗಾಯ

06:05 PM Dec 10, 2023 | Team Udayavani |

ರಾಮನಗರ: ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ‌ ಭಾನುವಾರ ಘಟನೆ ನಡೆದಿದೆ.

Advertisement

ಮೈಸೂರಿನಿಂದ ಬೆಂಗಳೂರಿಗೆ ತರಳುತ್ತಿದ್ದ ಕಾರಿನ ಟೈರ್ ಏಕಾಏಕಿ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನ ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next