Advertisement

ಡೀಮ್ಡ್ ಅರಣ್ಯ; ರಾಜಕೀಯ ಹೇಳಿಕೆಗಳಿಂದ ಲಾಭವಿಲ್ಲ: ರೈ

12:29 AM Dec 13, 2022 | Team Udayavani |

ಮಂಗಳೂರು : ರಾಜ್ಯದಲ್ಲಿನ 6 ಲಕ್ಷ ಹೆಕ್ಟೇರ್‌ ಭೂಮಿ ಡೀಮ್ಡ್ ಫಾರೆಸ್ಟ್‌ ಪಟ್ಟಿಯಿಂದ ಹೊರಗೆ ಬರಬೇಕಾದರೆ ಸುಪ್ರೀಂ ಕೋರ್ಟ್‌ ನಿಂದಲೇ ಆದೇಶವಾಗಬೇಕೇ ಹೊರತು ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಹೇಳಿಕೆಗಳಿಂದ ಅಸಾಧ್ಯ. ಅವೆಲ್ಲವೂ ರಾಜಕೀಯ ಹೇಳಿಕೆಗಳು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement

ಸರಕಾರ ಈ ಆದೇಶ ಶೀಘ್ರ ಬರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ಆಗ್ರಹಿಸಿದರು.

ಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಡೀಮ್ಡ್ ಅರಣ್ಯದ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ರಾಜ್ಯ ಸರಕಾರ ಕಂದಾಯ ಇಲಾಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವರದಿ ತಯಾರಿಸಲಾಗಿತ್ತು. ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಸುಮಾರು 6 ಲಕ್ಷ ಹೆಕ್ಟೇರ್‌ ಭೂಮಿಯನ್ನು ಡೀಮ್ಡ್ ಫಾರೆಸ್ಟ್‌ನಿಂದ ಕೈಬಿಡೇಕೆಂದು ವರದಿ ನೀಡಲಾಗಿತ್ತು. ಆದರೆ ಸರ್ವೇ ನಂಬರ್‌ ವಿಭಾಗವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಅದನ್ನು ತಿರಸ್ಕರಿಸಲಾಗಿತ್ತು.

ನಾನು ಅರಣ್ಯ ಸಚಿವನಾಗಿದ್ದ ವೇಳೆ ಈ ವಿಷಯ ಕೈಗೆತ್ತಿಕೊಂಡು ಕಂದಾಯ ಮತ್ತು ಅರಣ್ಯ ಇಲಾಖೆ ಯಿಂದ ಜಂಟಿ ಸರ್ವೇ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ನಾಲ್ಕು ವರ್ಷದಲ್ಲಿ ಭೌತಿಕ ಸರ್ವೇ ನಡೆಸಿ 6 ಲಕ್ಷ ಹೆಕ್ಟೇರ್‌ ಹೊರಗೆ ಬಿಡಬೇಕೆಂದು ವರದಿ ತಯಾರಿಸಲಾಗಿತ್ತು. ಅದನ್ನು ಆಧಾರವಾಗಿಟ್ಟು ಕೊಂಡು ಇದೀಗ ಮುಖ್ಯಮಂತ್ರಿ ಹಾಗೂ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ವಾಸ್ತವ ದಲ್ಲಿ ಈ ವರದಿ ಸುಪ್ರೀಂ ಕೋರ್ಟ್‌ನಿಂದ ಆದೇಶವಾಗಿ ಬರಬೇಕಾಗಿದೆ. ಅದಕ್ಕಾಗಿ ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಪಡೆದು ಅದನ್ನು ಸುಪ್ರೀಂ ಕೋರ್ಟ್‌ಗೆ ಕಳುಹಿಸಿ ಆದೇಶ ಆಗುವಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ವಿವರಿಸಿದರು.

ಗೆಲುವಿನ ಭರವಸೆ
ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದಲ್ಲಿ ವಿವಿಧ ಕ್ಷೇತ್ರಗಳಿಗೆ ಸಾಕಷ್ಟು ಆಕಾಂಕ್ಷಿಗಳಿಂದ ಟಿಕೆಟ್‌ಗಾಗಿ ಅರ್ಜಿಗಳು ಬಂದಿವೆ ಎಂದ ಮೇಲೆ ಪಕ್ಷದ ಮೇಲೆ ನಂಬಿಕೆ ಇದೆ; ಪಕ್ಷ ಜಯಗಳಿಸಲಿದೆ ಎಂಬ ಹಿನ್ನೆಲೆಯಲ್ಲಿ ಇಷ್ಟೊಂದು ಅರ್ಜಿಗಳು ಬಂದಿವೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ರಮಾನಾಥ ರೈ ಪ್ರತಿಕ್ರಿಯಿಸಿದರು.

Advertisement

ಮುಖಂಡರಾದ ಶಶಿಧರ ಹೆಗ್ಡೆ, ಪ್ರತಿಭಾ ಕುಳಾç, ನವೀನ್‌ ಡಿ’ಸೋಜಾ, ಅಪ್ಪಿ, ಸಲೀಂ, ಮುಸ್ತಫಾ, ಫ‌ಯಾಝ್, ಶಬೀರ್‌, ಕಿಶೋರ್‌ ಕುಮಾರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next