Advertisement
ಸೋಮವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರೌಡಿಶೀಟರ್ ಆಗಲು ಗಂಭೀರ ಅಪರಾಧ ಪ್ರಕರಣಗಳನ್ನು ಹೊಂದಿರಬೇಕಾಗುತ್ತದೆ. ಅಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ತಪ್ಪಲ್ಲ. ನಾನು ರೌಡಿಶೀಟರ್ ಆಗಿದ್ದವ. ರಾಜಕೀಯ ಕ್ಷೇತ್ರದಲ್ಲಿ ಇದೆಲ್ಲಾ ಸಾಮಾನ್ಯ ಎಂದು ಸಿಟಿ ರವಿಯವರು ಹೇಳುವ ಮೂಲಕ ಬಿಜೆಪಿಯಲ್ಲಿ ರೌಡಿಸಂ ಮಾಡುವವರಿಗೆ ಅವಕಾಶ ನೀಡಲಾಗುತ್ತೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಸುರತ್ಕಲ್ ಟೋಲ್ ರದ್ದತಿ ಕುರಿತಂತೆ ಸಾಮಾಜಿಕ ನಾಯಕರ ನೇತೃತ್ವದಲ್ಲಿ ನಡೆದ ಹೋರಾಟ ತಾರ್ಕಿಕ ಅಂತ್ಯ ಕಂಡಿದೆ. ಈ ನಡುವೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಹಿತಾಸಕ್ತಿ ಮರೆತು ಹೇಳಿಕೆ ನೀಡಿದ್ದು, ಅದನ್ನು ಖಂಡಿಸುವುದಾಗಿ ಹೇಳಿದರು.
Related Articles
Advertisement
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಸ್‌ಐಟಿಗೆ ಆಗ್ರಹಸಿದ್ದœರಾಮಯ್ಯ ಸರಕಾರ ಇದ್ದಾಗ ಏಳು ಪ್ರಮುಖ ಹತ್ಯಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಆದರೆ ಬಿಜೆಪಿ ಸುಳ್ಳು ಹೇಳುವುದೇ ತಮ್ಮ ಧರ್ಮ ಎಂಬುದನ್ನು ಕರಗತಮಾಡಿಕೊಂಡಿದೆ. ಹತ್ಯಾ ಪ್ರಕರಣಗಳು ನಡೆದಾಗ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದ ತನಿಖಾ ತಂಡ ಮಾಡಿ ತನಿಖೆ ನಡೆಸಿದರೆ ನೈಜ ಅಂಶಗಳು ಹೊರ ಬರ್ತುವೆ. ಇಂತಹ ಹತ್ಯೆಗಳ ಹಿಂದಿನ ಸೂತ್ರಧಾರನ್ನು ಹಿಡಿಯಬಹುದಾಗಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಿ, ಇಂತಹ ಕೋಮು ದ್ವೇಷದಿಂದ ನಡೆದ ಹತ್ಯೆಗಳನ್ನು ತನಿಖೆಗೆ ಒಳಪಡಿಸಲು ಆಗ್ರಹಿಸುವುದಾಗಿಯೂ ನುಡಿದರು. ಮುಖಂಡರಾದ ಅಪ್ಪಿ, ಪ್ರತಿಭಾ ಕುಳಾಯಿ, ಶಶಿಧರ ಹೆಗ್ಡೆ, ವಿಶ್ವಾಸ್ ಕುಮಾರ್ ದಾಸ್, ನೀರಜ್ ಪಾಲ್, ಸಿ.ಎಂ. ಮುಸ್ತಫಾ, ಶಬೀರ್, ನಿತ್ಯಾನಂದ ಶೆಟ್ಟಿ, ನಝೀರ್ ಬಜಾಲ್ ಉಪಸ್ಥಿತರಿದ್ದರು.