Advertisement

ರಾಮಸಮುದ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

08:56 PM Aug 05, 2021 | Team Udayavani |

ಯಾದಗಿರಿ: ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಮೇಲ್ಛಾವಣಿ ಕುಸಿದು ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಗುರುವಾರ ಮಧ್ಯಾಹ್ನ ಗರ್ಭಿಣಿಯರು ಮತ್ತು ಮಕ್ಕಳಿಗೆ ಲಸಿಕೆ ನೀಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಚಾವಣಿ ಕುಸಿದಿದೆ.

ಸುಮಾರು 30 ವರ್ಷಗಳ ಹಳೆಯದಾದ ಕಟ್ಟಡದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗಳ ತಲೆ ಮತ್ತು ಭುಜಕ್ಕೆ ಗಾಯವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಳಿಚಕ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next