Advertisement

ರಂಭಾಪುರಿ ಶ್ರೀ ಅವಹೇಳನ; ವ್ಯಕ್ತಿ ಬಂಧನ

06:25 AM Nov 29, 2018 | Team Udayavani |

ಕಲಬುರಗಿ: ರಂಭಾಪುರಿ ಜಗದ್ಗುರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Advertisement

ಜೇವರ್ಗಿ ಕಾಲೋನಿಯ ಅಯ್ಯಣಗೌಡ ಪಾಟೀಲ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ರಂಭಾಪುರಿ ಜಗದ್ಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದ. ಅದನ್ನು ಖಂಡಿಸಿ ವೀರಶೈವ-ಲಿಂಗಾಯತ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಂಧಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸ್ಟೇಷನ್‌ ಬಜಾರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರಾರಿಯಾಗಿದ್ದ ಆರೋಪಿ, ಅಯ್ಯಣಗೌಡನನ್ನು ಬುಧವಾರ ಬಂಧಿಸಿ, ನ್ಯಾಯಾಂಗ ವಶಕ್ಕೊಪ್ಪಿಸಲಾಗಿದೆ ಎಂದು ಎಸ್‌ಪಿ ಎನ್‌.ಶಶಿಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next