Advertisement

ರಂಭಾಪುರಿ ಶ್ರೀ-ಸಿದ್ದು ಚರ್ಚೆ ಬಹಿರಂಗಪಡಿಸಲಾಗದು: ಎಚ್‌.ಆಂಜನೇಯ

09:49 PM Aug 21, 2022 | Team Udayavani |

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಂಭಾಪುರಿ ಶ್ರೀಗಳ ನಡುವೆ ನಡೆದ ಚರ್ಚೆಯ ವಿವರಗಳನ್ನು ಬಹಿರಂಗಪಡಿಸಲಾಗದು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ನಮ್ಮ ಸರ್ಕಾರ ಅ ಧಿಕಾರದಲ್ಲಿದ್ದಾಗ ನಡೆದ ವಿದ್ಯಮಾನಗಳನ್ನು ಸಿದ್ದರಾಮಯ್ಯ ಅವರು ಶ್ರೀಗಳಿಗೆ ವಿವರಿಸಿದ್ದಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದರು.

Advertisement

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಈಗ ಮುಗಿದ ಆಧ್ಯಾಯ. ಪ್ರತ್ಯೇಕ ಧರ್ಮದ ವಿಷಯಕ್ಕೆ ಸಂಬಂ ಧಿಸಿದಂತೆ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ರಂಭಾಪುರಿ ಶ್ರೀಗಳ ಭೇಟಿ ವೇಳೆ ಏನೆಲ್ಲ ಆಗಿತ್ತು ಎಂಬುದನ್ನು ಈಗಾಗಲೇ ಹೇಳಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಈಗ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೀರಶೈವ ಸಮ್ಮೇಳನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಂಕರಪ್ಪ ಪ್ರತ್ಯೇಕ ಧರ್ಮಕ್ಕಾಗಿ ಅರ್ಜಿ ಕೊಟ್ಟಿದ್ದರೇ ಹೊರತು ಸರ್ಕಾರ ಅರ್ಜಿ ಆಹ್ವಾನಿಸಿರಲಿಲ್ಲ.

ಆ ಸಂದರ್ಭದಲ್ಲಿ ಪಂಚಪೀಠಗಳ ಮಠಾಧೀಶರು ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮುರುಘಾ ಶರಣರು, ಲಿಂಗೈಕ್ಯರಾದ ಮಾತೆ ಮಹಾದೇವಿ, ಇಳಕಲ್‌ ಶ್ರೀಗಳು, ತೋಂಟದಾರ್ಯ ಶ್ರೀಗಳು ಹಾಗೂ ಪಂಚ ಪೀಠಗಳ ಮಠಾಧಿಧೀಶರನ್ನು ಹೊರತುಪಡಿಸಿ ಇನ್ನುಳಿದ ಹಲವು ಮಠಾಧಿಧೀಶರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ವರದಿ ಪಡೆದಿತ್ತು. ಧರ್ಮವನ್ನು ಪ್ರತ್ಯೇಕಗೊಳಿಸಿ ಲಿಂಗಾಯತರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸವಲತ್ತುಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೇನೂ ಬಾಧಕವಾಗಿಲ್ಲ. ಈ ವಿಚಾರದಲ್ಲಿ ತಪ್ಪಾಗಿದೆ ಎನ್ನುವುದು ಡಿ.ಕೆ. ಶಿವಕುಮಾರ್‌ ಅವರ ವೈಯಕ್ತಿಕ ಅಭಿಪ್ರಾಯ. ಆಗ ಅವರು ಕೆಪಿಸಿಸಿ ಅಧ್ಯಕ್ಷರಾಗಿರಲಿಲ್ಲ. ಈ ಹೇಳಿಕೆ ನೀಡಿ ಎರಡು ವರ್ಷಗಳಾಗಿದೆ ಎಂದರು.

ಆ.26ಕ್ಕೆ ಪ್ರತಿ ಜಿಲ್ಲೆಯಿಂದ ಕೊಡಗಿಗೆ:
ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಕೊಡಗು ನಮ್ಮದು ಎಂದು ತೋರಿಸಲು ಪ್ರತಿ ಜಿಲ್ಲೆಯಿಂದಲೂ 1-2 ಸಾವಿರ ಜನ ಕೊಡಗಿಗೆ ತೆರಳುತ್ತೇವೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಬಿಜೆಪಿ ಹಸಿ ಸುಳ್ಳು ಹೇಳುತ್ತಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ಸಿನವನೆಂದು ಹೇಳಿದರೆ ಶೇ.40 ಲಂಚದಲ್ಲಿ ನಿನಗೂ ಪಾಲು ಕೊಡುತ್ತೇವೆ ಎಂದು ಆಮಿಷವೊಡ್ಡಿರಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next