Advertisement

Ramdurg: ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

08:09 PM Nov 02, 2023 | Team Udayavani |

ರಾಮದುರ್ಗ: ಕಲುಷಿತ ಆಹಾರ ಸೇವಿಸಿ ಮೂರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಇನ್ನೂ ಅನೇಕ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಬಳಲುತ್ತಿರುವ ಘಟನೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ನಡೆದಿದೆ.

Advertisement

ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ವಸತಿ ನಿಲಯದ ವಿದ್ಯಾರ್ಥಿಗಳು ಏಕಾಏಕಿ ಶಾಲೆಯ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸುದ್ದಿಯನ್ನು ಅರಿತ ಗ್ರಾಮದ ಅನೇಕ ಯುವಕರು ವಿದ್ಯಾರ್ಥಿಗಳಿಗೆ ಸಾತ ನೀಡಿ ಪ್ರತಿಭಟನೆ ಬೆಂಬಲಿಸಿದರು.

ಸಾಲಹಳ್ಳಿ ಗ್ರಾಮದಲ್ಲಿರುವ ಈ ವಸತಿ ಶಾಲೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಊಟದಲ್ಲಿ ನುಸಿ, ಬಾಲಹುಳ ಬರುತ್ತಿರುವ ಕುರಿತು ಶಾಲೆಯ ಪ್ರಾಚಾರ್ಯರ ಗಮನಕ್ಕೆ ತಂದರು ಪ್ರಾಚಾರ್ಯರೇ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗದರಿಸಿ ವಿದ್ಯಾರ್ಥಿಗಳ ಬಾಯಿ ಮುಚ್ಚಿಸುತ್ತಿದ್ದಾರೆ. ವಸತಿ ಶಾಲೆಯಲ್ಲಿ ಯಾವುದೇ ಸಮಸ್ಯೆ ಹೇಳಿದರು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಈ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳಿಗೆ ಮಾತ್ರ ನೇಮಕಾತಿ ಆದೇಶವಿದ್ದರೂ ಹೆಚ್ಚುವರಿಯಾಗಿ ಸುಮಾರು 60 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸೇರಿ 310 ಕ್ಕೂ ಅಧಿಕ ವಿದ್ಯಾರ್ಥಿಗಳು ಅಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯ ಪ್ರಾಚಾರ್ಯರು ಸಹ ಸರಿಯಾಗಿ ಶಾಲೆಗೆ ಬರುತ್ತಿಲ್ಲ. ವಾರಕ್ಕೊಮ್ಮೆ ಮಾತ್ರ ಬಂದು ಹೋಗುತ್ತಾರೆ ಎಂದು ಆರೋಪಿಸಿದರು.

ಪ್ರತಿಭಟನಾ ಸುದ್ದಿ ತಿಳಿದು ವಸತಿ ನಿಲಯಕ್ಕೆ ಆಗಮಿಸಿದ ಸರಕಾರಿ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಡಾ| ಎ.ಎಂ ಮಿರ್ಜನ್ನವರ ಅವರ ಮುಂದೆ ಅಲ್ಲಿನ ಪರಸ್ಥಿತಿಯ ಕುರಿತು ವಿದ್ಯಾರ್ಥಿಗಳು ಆರೋಪಿಸಿದರು.

Advertisement

ಎಲ್ಲವನ್ನು ಆಲಿಸಿದ ಶಾಸಕರು ಕೂಡಲೇ ಪ್ರಾಚಾರ್ಯರ ಹಾಗೂ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಬೇಕು. ವಸತಿ ನಿಲಯದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಮತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಅಲ್ಲಿನ ಸಮಸ್ಯೆಯನ್ನು ಆಲಿಸಿದ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಡಾ|ಎ.ಎಂ. ಮಿರ್ಜನ್ನವರ ವಸತಿ ನಿಲಯದ ಪ್ರಾಚಾರ್ಯರು ಹಾಗೂ ಮೇಲ್ವಿಚಾರಕರನ್ನು ಅಲ್ಲಿಂದ ಬೇರೆಡೆ ತಾತ್ಕಾಲಿಕ ನಿಯೋಜನೆ ಮಾಡಿ. ಇಲ್ಲಿಯ ಬೇರೆ ಪ್ರಾಚಾರ್ಯರು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಈ ಎಲ್ಲ ಸಮಸ್ಯೆಗೆ ಕಾರಣವಾದ ಪ್ರಾಚಾರ್ಯರು ಹಾಗೂ ಮೇಲ್ವಿಚಾರಕರ ಮೇಲೆ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವದಾಗಿ ತಿಳಿಸಿ, ಮೂರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇನ್ನೂಳಿದ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಇದ್ದು ಆರೋಗ್ಯದ ಕಾಳಜಿ ವಹಿಸುತ್ತಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next