ರಮೇಶ್ ಅರವಿಂದ್ ನಟನೆಯ “100′ ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ನ.19ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದು ಸೈಬರ್‌ಕ್ರೈಮ್ ಸುತ್ತ ನಡೆಯುವ ಕಥೆಯಾಗಿದ್ದು, ಈ ಸಿನಿಮಾವನ್ನು ನೋಡುವಂತೆ ಚಿತ್ರತಂಡ ಗೃಹ ಸಚಿವರನ್ನು ಇತ್ತೀಚೆಗಷ್ಟೇ ಮನವಿ ಮಾಡಿಕೊಂಡಿದೆ. ಗೃಹ ಸಚಿವರು ಕೂಡಾ ಸಿನಿಮಾ ನೋಡುವ ಭರವಸೆ ನೀಡಿದ್ದಾರೆ. ತುಂಬಾ ಗ್ಯಾಪ್‌ನ ನಂತರ ರಮೇಶ್ ಅರವಿಂದ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಇವತ್ತಿನ ಟ್ರೆಂಡ್‌ಗೆ ತಕ್ಕುದಾದ ಅಂಶಗಳನ್ನು ಹೇಳಿದ್ದಾರಂತೆ.
ಇದನ್ನೂ ಓದಿ:ಹಾಡಿನಲ್ಲಿ ರಚಿತಾ ಬೋಲ್ಡ್ ಲುಕ್: ಬೇಡಿಕೆ ಪಡೆದುಕೊಂಡ ರಚ್ಚು
ಈ ಚಿತ್ರದ ಬಗ್ಗೆ ಮಾತನಾಡುವ ರಮೇಶ್, “ಹುಡುಗಿಯರನ್ನು ಹುಡುಗರು ಫಾಲೋ ಮಾಡೋದು, ತೊಂದರೆಕೊಡೋದು ಎಂಬ ಒಂದುಕಾಲವಿತ್ತು. ಈಗ ಫಾಲೋ ಮಾಡೋದು, ತೊಂದರೆಕೊಡೋದು ಎಲ್ಲವೂ ಸೋಶಿಯಲ್ ಮೀಡಿಯಾ ಮೂಲಕ ಆಗುತ್ತಿದೆ. ಹೆಣ್ಣು ಮಕ್ಕಳು ಯಾರನ್ನೋ ಫ್ರೆಂಡ್ ಆಗಿ ಒಪ್ಪಿಕೊಳ್ಳುತ್ತಾರೆ. ಆ ನಂತರ ಫ್ರೆಂಡ್‌ಶಿಪ್‌ನಕಟ್ ಮಾಡೋಕೂ ಆಗಲ್ಲ, ಅನ್‌ಫ್ರೆಂಡ್ ಮಾಡೋಕೂ ಆಗಲ್ಲ. ಈ ತರಹ ವಿಪರೀತ ತೊಂದರೆಯಲ್ಲಿಕೆಲವು ಹೆಣ್ಮಕ್ಕಳು ಸಿಲುಕಿದ್ದಾರೆ. ಇದನ್ನು “ಸೈಬರ್ ಸ್ಟಾಕಿಂಗ್’ ಎನ್ನುತ್ತಾರೆ. ಕಂಪ್ಯೂಟರ್, ಮೊಬೈಲ್ ಮೂಲಕ ಸತತವಾಗಿ ಹುಡುಗಿಯರ ಮೇಲೆಕಣ್ಣಿಟ್ಟು ಅವರಿಗೆ ತೊಂದರೆ ಕೊಡುವ ಒಂದಷ್ಟು ಮಂದಿ ಇದ್ದಾರೆ. ಆ ತರಹದ ಕಥಾ ವಸ್ತುವನ್ನಿಟ್ಟುಕೊಂಡು ಹೆಣೆದಿರುವ ಕಥೆ 100′ ಎನ್ನುತ್ತಾರೆ ರಮೇಶ್ ಅರವಿಂದ್.
ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದ್ದು, ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ.