Advertisement

ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!

01:58 PM Apr 19, 2021 | Team Udayavani |

ಬೆಳಗಾವಿ : ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೋಮ್ ಕ್ವಾರಂಟೈನ್ ಆಗಿದ್ದ ರಮೇಶ್ ಜಾರಕಿಹೊಳಿ ಗುಣಮುಖರಾಗಿದ್ದಾರೆ.

Advertisement

ರಮೇಶ್ ಜಾರಕಿಹೊಳಿ ಅವರಿಗೆ ಏ. 1 ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ನಾಲ್ಕು ದಿನದ ಹಿಂದೆಯೇ ರಮೇಶ್ ಕೊರೋನಾ ವರದಿ ನೆಗೆಟಿವ್ ಬಂದಿದೆ ಎಂದು ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟೀನ್ ಮಾಹಿತಿ ನೀಡಿದ್ದಾರೆ.

ಇನ್ನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 20ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ  ನೋಟಿಸ್ ನೀಡಿದೆ. ಮೂರು ದಿನಗಳ ಹಿಂದೆ ಗೋಕಾಕ್‌ ಗೆ ಬಂದಿದ್ದ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಮೂಲಗಳು ಹೇಳುವ ಪ್ರಕಾರ ಕೋವಿಡ್ ಸೋಂಕಿನಿಂದ ಗುಣಮುಖರಾದ್ರೂ ಕೂಡ ನಾಳೆ(ಏ.20) ರಮೇಶ್ ವಿಚಾರಣೆ ಹಾಜರಾಗುವುದು ಡೌಟ್ ಎನ್ನಲಾಗುತ್ತಿದೆ. ನೆಗೆಟಿವ್ ವರದಿ ಬಂದರೂ ಸಂಪೂರ್ಣವಾಗಿ ಗುಣಮುಖರಾಗದ ಹಿನ್ನೆಲೆಯಲ್ಲಿ ಎಲ್ಲಿಯೂ ಸುತ್ತಾಡದಂತೆ, ಒಂದು ವಾರ ಮನೆಯಲ್ಲೇ ರೆಸ್ಟ್ ಮಾಡುವಂತೆ ರಮೇಶ್ ಜಾರಕಿಹೊಳಿ ಅವರಿಗೆ ವೈದ್ಯರ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next