Advertisement

ರಮೇಶ್‌ ಜಾರಕಿಹೊಳಿ ಸ್ವತಂತ್ರರು: ದಿನೇಶ್‌

11:06 PM Apr 23, 2019 | Team Udayavani |

ಬೆಂಗಳೂರು: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಸ್ವತಂತ್ರರು. ಅವರು ಯಾವ ತೀರ್ಮಾನ ತೆಗೆದುಕೊಳ್ಳಲಿ, ಬಿಜೆಪಿಯ ಕೆಲವು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ್‌ ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ನಾವು ಸಾಕಷ್ಟು ಬಾರಿ ಅವರನ್ನು ಭೇಟಿ ಮಾಡಲು ಪ್ರಯತ್ನ ಮಾಡಿದ್ದೆವು. ಆದರೆ, ಅವರು ಯಾರಿಗೂ ಸಿಗದೇ ದೂರ ಉಳಿದರು.

ಸದ್ಯಕ್ಕೆ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡಬೇಕು. ತಕ್ಷಣವೇ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಈಗ ನಮ್ಮೆದುರು ಎರಡು ಉಪ ಚುನಾವಣೆಗಳಿವೆ. ಆ ಕಡೆಗೆ ನಾವು ಹೆಚ್ಚು ಗಮನ ಹರಿಸಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next