ವಿಜಯಪುರ: ರಮೇಶ ಜಾರಕಿಹೊಳಿ ಅವರು ನನ್ನನ್ನು ರೊಚ್ಚಿಗೆಬ್ಬಿಸುವ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, ನಿತ್ಯ ಸೂರ್ಯ-ಚಂದ್ರ ನಿತ್ಯ ಹುಟ್ಟುವಷ್ಟೇ ಕಾಂಗ್ರೆಸ್ ಸರ್ಕಾರ ರಚನೆಯಾಗುವುದ ಖಚಿತ. 140 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್ ಸುಭದ್ರ ಸರ್ಕಾರ ರಚನೆ ಆಗಲಿದೆ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಆಂತರಿಕ ಕಚ್ಚಾಟದಿಂದ ಕಂಗೆಟ್ಟಿದ್ದು, ಬಹುತೇಕ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳಿಗೆ ವಲಸೆ ಹೋಗಿದ್ದಾರೆ. ಹೀಗಾಗಿ ಬಿಜೆಪಿ ಚುನಾವಣೆಯಲ್ಲಿ 60ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಕಠಿಣವಾಗಿದೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ್ ಅವರಂಥ ಮಾತಿಗೆ ಉತ್ತರಿಸಲಾರೆ. ಬಿಜೆಪಿ ನಾಯಕರು ಹಿಂದೂಗಳನ್ನು ಖರೀದಿ ಮಾಡಿಲ್ಲ ಎಂದು ಪ್ರತಿಕ್ರಿಯಿಸಿದರು.
Related Articles
ನಾನು ಈಗಾಗಲೇ ಗದಗ, ಕೊಪ್ಪಳ, ಬೆಳಗಾವಿ ಪ್ರಚಾರ ಮುಗಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದೇನೆ. ಬಾಗಲಕೋಟೆ, ಕಲಬುರಗಿ ಜಿಲ್ಲೆಯ ಪ್ರವಾಸ ಮಾಡಲಿದ್ದು, ಪಕ್ಷ ಸೂಚಿಸುವ ಸ್ಥಳದಲ್ಲಿ ಪ್ರಚಾರ ಮಾಡಲಿದ್ದೇನೆ ಎಂದರು.