Advertisement

ಜನರಿಂದ ಹೆಚ್ಚಿನ ದರ ವಸೂಲು ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ: ರಮೇಶ ಜಾರಕಿಹೊಳಿ

03:48 PM May 16, 2021 | Team Udayavani |

ಗೋಕಾಕ: ಕೊರೊನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

Advertisement

ಶನಿವಾರ ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.  ಎಲ್ಲರೂ ಕೂಡಿ ಮಹಾಮಾರಿ ಕೊರೊನಾ ರೋಗದ ವಿರುದ್ಧ ಹೋರಾಟ ಮಾಡಿ ಸೋಂಕು ಹರಡದಂತೆ ತಡೆಗಟ್ಟಲು ಮೊದಲ ಪ್ರಾಮುಖ್ಯತೆಯನ್ನು ನೀಡಿದರೆ ಕೊರೋನಾ ಮಹಾಮಾರಿಯನ್ನು ಗೆಲ್ಲಬಹುದಾಗಿದೆ ಎಂದರು. ಆಕ್ಸಿಜನ್‌ ಸರಬರಾಜಿನಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಿದ್ದು ಪಕ್ಕದ ಕೋಲ್ಹಾಪೂರ ಜಿಲ್ಲೆಯ ಉಸ್ತುವಾರಿ ಸಚಿವರೊಂದಿಗೆ ಹಾಗೂ ಸಚಿವ ಜಗದೀಶ ಶೆಟ್ಟರ್‌ ಅವರೊಂದಿಗೆ ಮಾತನಾಡಿ ಆದಷ್ಟು ಬೇಗ ಜಿಲ್ಲೆಗೆ ಆಕ್ಸಿಜನ್‌ ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೊರೊನಾ ಹಾಗೂ ಸೆಮಿ ಲಾಕಡೌನ್‌ ನಿಂದ ಸಾರ್ವಜನಿಕರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು ರೋಗಿಗಳಿಂದ ಹೆಚ್ಚಿನ ಹಣ ತಗೆದುಕೊಳ್ಳದೆ ಸರಕಾರ ನಿಗದಿ ಪಡಿಸಿದ ದರವನ್ನು ಮಾತ್ರ ತಗೆದುಕೊಳ್ಳಬೇಕು ಇದಕ್ಕೆ ಸಂಬಂಧಿ ಸಿದಂತೆ ನಮ್ಮ ಕಾರ್ಯಾಲಯಕ್ಕೆ ಸಾಕಷ್ಟು ಕರೆಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಸರಿ ಹೋಗದಿದ್ದರೆ ಅಂತಹ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಕೊರೊನಾ ರೋಗಿಗಳು ಮರಣ ಹೊಂದಿದಾಗ ಕುಟುಂಬಸ್ಥರು ಶವಸಂಸ್ಕಾರಕ್ಕೆ ಹಿಂದೇಟು ಹಾಕಿದರೆ ಅಂತಹ ಶವಗಳ ಬಗ್ಗೆ ವೈದ್ಯರು ತಾಲೂಕಾಡಳಿತಕ್ಕೆ ಮಾಹಿತಿ ನೀಡಿದರೆ ನಗರಸಭೆ ಹಾಗೂ ಆರೋಗ್ಯ ಇಲಾಖೆಯವರ ಸಹಯೋಗದಲ್ಲಿ ಶವಸಂಸ್ಕಾರ ಮಾಡಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಸೆಮಿ ಲಾಕಡೌನ್‌ ನಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಹಿಂದಿನ ಪೆಡಿಂಗ್‌ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಪರಿಣಾಮ ಜನರು ಭಯಭೀತರಾಗುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅಂತಹ ಗಂಭೀರ ಪರಿಸ್ಥಿತಿ ಇಲ್ಲ. ಯಾರೂ ಹೆದರುವ ಅವಶ್ಯಕತೆ ಇಲ್ಲ. ಅಧಿ ಕಾರಿಗಳು ಹಾಗೂ ವೈದ್ಯರು ಸಮನ್ವಯದಿಂದ ಕಾರ್ಯನಿರ್ವಹಿಸಿ ಕೊರೊನಾ ಸೋಂಕನ್ನು ತಡೆಯಲು ಹೋರಾಟ ಮಾಡೋಣ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next