Advertisement

ಸಚಿವ ಸ್ಥಾನಕ್ಕಾಗಿ ತೀವ್ರ ಪ್ರಯತ್ನ : ಫಡ್ನವಿಸ್ ಭೇಟಿಯಾದ ರಮೇಶ ಜಾರಕಿಹೊಳಿ

05:11 PM Feb 03, 2022 | Team Udayavani |

ಬೆಳಗಾವಿ : ಸಚಿವ ಸ್ಥಾನಕ್ಕಾಗಿ ತೀವ್ರ ಪ್ರಯತ್ನ ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಗೋವಾದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವದು ಹೊಸ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Advertisement

ಗೋವಾ ಚುನಾವಣೆಯಲ್ಲಿ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ದೇವೇಂದ್ರ ಫಡ್ನವಿಸ್ ಅವರನ್ನು ಖಾಸಗಿ ಹೋಟೆಲ್ ದಲ್ಲಿ ಭೇಟಿ ಮಾಡಿದ ರಮೇಶ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನ್ಯಾಯಾಲಯ ದಲ್ಲಿ ತಮ್ಮ ವಿರುದ್ಧ ಇರುವ ಪ್ರಕರಣದಿಂದ ಮುಕ್ತವಾಗಿ ಬರುವ ವಿಶ್ವಾಸ ಹೊಂದಿರುವ ರಮೇಶ ಜಾರಕಿಹೊಳಿ ಈ ಬಾರಿ ತಮಗೆ ಸಚಿವ ಸ್ಥಾನ ಕೊಡಿಸುವಲ್ಲಿ ಪಕ್ಷದ ವರಿಷ್ಠರಿಗೆ ಶಿಫಾರಸ್ಸು ಮಾಡುವಂತೆ ಫಡ್ನವಿಸ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next