Advertisement

ಬೆಂಗಳೂರು:ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಸೋಮವಾರ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್‌ ಶೇಖಾವತ್‌ ಅವರೊಂದಿಗೆ ಚರ್ಚಿಸಲಿದ್ದಾರೆ.

Advertisement

ಸಭೆಗೂ ಮುನ್ನ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಇದನ್ನೂ ಓದಿ:ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಜಲಸಂಪನ್ಮೂಲ ಸಚಿವರೊಂದಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್‌ ಸೇರಿದಂತೆ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next