Advertisement

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

11:57 AM May 08, 2021 | Team Udayavani |

ಬೆಳಗಾವಿ/ಗೋಕಾಕ: ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರ ಕೋವಿಡ್ ನಿಯಂತ್ರಣದಲ್ಲಿ ಸಭೆ ನಡೆಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು.

Advertisement

ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಅವರು ಸೋಮವಾರದಿಂದ ಗೋಕಾಕ ನಗರ ಮತ್ತು ತಾಲೂಕು ಪ್ರದೇಶದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು.

ಗೋಕಾಕ್ ತಾಲೂಕಿನಾದ್ಯಂತ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಕ್ಷೇತ್ರದ ಪ್ರತಿ ಗ್ರಾಪಂ ಹಾಗೂ ನಗರಸಭೆಯ ವಾರ್ಡ್ ನಲ್ಲಿ ಐವರು ಕೋವಿಡ್ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಬೇಕು. ಕೊರೊನಾ ಸೋಂಕಿತರಿಗೆ ಹಾಗೂ ಅಗತ್ಯ ಇರುವವರಿಗೆ ಸೇವೆ ನೀಡಬೇಕು.‌ ಕಳೆದ ಸಲಕ್ಕಿಂತಲೂ ಈ ಬಾರಿ ಕಟ್ಟುನಿಟ್ಟಾಗಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಸದ್ಯ ತಾಲೂಕಿನಲ್ಲಿ ಬೆಡ್ ಸಮಸ್ಯೆ ಇಲ್ಲ. ಅಗತ್ಯವಿದ್ದರೆ 100 ಹಾಸಿಗೆಗೆ ವಿಸ್ತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ಕೈಗೊಳ್ಳಾಗಿದೆ. 15 ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸಯಲಿದೆ. ಕೊರೊನಾ ತಡೆಗೆ ಎಲ್ಲರೂ ಸಹಕರಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next