ಬೆಂಗಳೂರು: ತಮ್ಮ ವಿರುದ್ದದ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೆ ಕೊನೆಗೂ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಬುಧವಾರ( ಮಾ.3) ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಈಗಾಗಲೇ ರಾಜೀನಾಮೆ ಪತ್ರ ಸಲ್ಲಿಸಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
5 ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದೆಂಬ ಕಾರಣಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನಿರ್ದೋಷಿಯಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ: ಸಿದ್ದು ಆಗ್ರಹ
ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು.
ನಂತರದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ರಾಜ್ಯಾದ್ಯಂತ ಆಗ್ರಹ ಕೇಳಿಬಂದಿತ್ತು. ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಪ್ರತಿಭಟನೆಯನ್ನು ನಡೆಸಿದ್ದವು. ಇದೀಗ ರಮೇಶ್ ಜಾರಕಿಹೊಳಿ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ರವಾನಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ 19 ಲಸಿಕೆ ಭರವಸೆ: ಸತತ 3ನೇ ದಿನವೂ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಏರಿಕೆ