Advertisement
ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನೀಗ ತಾಂತ್ರಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ರಾಜೀನಾಮೆ ನೀಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
Related Articles
ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ ಸಹೋದರ ಲಖನ್ ಜಾರಕಿಹೊಳಿ ನಾನು ಎಲ್ಲೋ ಹೋಗಿ ಹಾಳಾಗಿ ಹೋಗಿಲ್ಲ. ಕಾಂಗ್ರೆಸ್‌ನಲ್ಲೇ ಇದ್ದೇನೆ.ಸಿದ್ದರಾಮಯ್ಯ ನಮ್ಮ ನಾಯಕ. ಗೋಕಾಕ್ ಕಾಂಗ್ರೆಸ್‌ನ ಭದ್ರ ಕೋಟೆ ಎಂದರು.
Advertisement
ನನಗೆ ಗೊತ್ತಿಲ್ಲ !
ರಾಜೀನಾಮೆ ವಿಷಯ ನನಗೆ ಗೊತ್ತಿಲ್ಲ .ಜಾರಕಿಹೊಳಿ ಸಹೋದರರು , ಮಹೇಶ್ ಕುಮಟಳ್ಳಿ ಅವರು ನನ್ನ ಸ್ನೇಹಿತರು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಪಾಟೀಲ್ ಹೇಳಿದರು.
ತೀವ್ರ ಅಸಮಾಧಾನ
ಕಾಂಗ್ರೆಸ್ ಪರ ಪ್ರಚಾರದಿಂದ ದೂರ ಉಳಿದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ಹೊರ ಹಾಕಿ ಲಖನ್‌ನನ್ನು ವಿರುದ್ಧವಾಗಿ ಉಪಚುನಾವಣೆಯಲ್ಲಿ ಕಣಕ್ಕಿಳಿಸುವುದಾಗಿ ಘೋಷಿಸಿದ್ದರು. ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು.