Advertisement

ಅತಿವೃಷ್ಟಿಗೆ ಬೆಳಗಾವಿ ಜಿಲ್ಲೆಯಲ್ಲಿ 972 ಕೋಟಿ ಹಾನಿ : ಸಚಿವ ರಮೇಶ್ ಜಾರಕಿಹೊಳಿ

06:45 PM Aug 24, 2020 | sudhir |

ಬೆಳಗಾವಿ; ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

Advertisement

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದಾಗ್ಯೂ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀರು ಬಿಡುಗಡೆಯ ಬಗ್ಗೆ ಇದೇ ರೀತಿ ನಿರಂತರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ದಿಢೀರ್ ನೀರು ಬಿಡುಗಡೆಯಿಂದ ನದಿತೀರದ ಗ್ರಾಮಗಳಿಗೆ ತೊಂದರೆಯಾಗುತ್ತದೆ.
ಈ‌ ಬಾರಿ ಮಹಾರಾಷ್ಟ್ರದ ಜೊತೆ ಸಮನ್ವಯ ಸಮರ್ಪಕವಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು ಸಾಧ್ಯವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next