Advertisement

ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸುವ ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ: ಈಶ್ವರಪ್ಪ

11:49 AM Nov 28, 2020 | keerthan |

ಬೆಳಗಾವಿ: ರಮೇಶ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.

Advertisement

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ  ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಬಿ ಮಾಡುವದರಲ್ಲಿ ತಪ್ಪಿಲ್ಲ ಎಂದರು.

ಸಿ.ಪಿ.ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಕೊಡಿಸಲು ಜಾರಕಿಹೊಳಿ ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ, ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಅವರ ಋಣ ತೀರಿಸಬೇಕಾಗಿದೆ ಎಂದ ಅವರು ಬಿಜೆಪಿಯಲ್ಲಿ ಗುಂಪುಗಾರಿಕೆ ಇಲ್ಲ‌. ಗುಂಪುಗಾರಿಕೆ ಇರುವುದು ಕಾಂಗ್ರೆಸ್ ನಲ್ಲಿ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ:ಬಿಲ್ಲವ-ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಬೆಂಬಲ : ಡಿಸಿಎಂ ಡಾ| ಅಶ್ವಥ ನಾರಾಯಣ

ಕುರುಬ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸಬೇಕೆಂದು ಹೋರಾಟ ನಡೆಸಿದ್ದೇವೆ. ನಮ್ಮ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಇದೆ. ಸರ್ಕಾರವೂ ಕುರುಬ ಸಮಾಜವನ್ನು ಎಸ್.ಟಿ ವರ್ಗಕ್ಕೆ ಸೇರಿಸುವದಕ್ಕಾಗಿ ಅಧ್ಯಯನ ಸಮೀತಿ ರಚಿಸಿದೆ. ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ನಿರ್ಧಾರ ಹೊರಬೀಳಲಿದೆ ಎಂದು ಈಶ್ವರಪ್ಪ ಹೇಳಿದರು.

Advertisement

ಗ್ರಾಮ ಪಂಚಾಯತಿ ಚುನಾವಣೆಗೆ ವಿಶೇಷ ಆದ್ಯತೆ ಕೊಟ್ಟಿದ್ದೇವೆ. ಈ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುತ್ತೇವೆ ಎಂದು ಹೇಳಿದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕುರಿತು ಪ್ರಸ್ತಾಪಿಸಿದ ಅವರು ಡಿಸೆಂಬರ್ 4 ರಂದು ಬಿಜೆಪಿ ಕೋರ್ ಕಮೀಟಿ ಸಭೆ ಇದೆ. ದಿನಾಂಕ 5 ರಂದು ಬೆಳಗಾವಿಯಲ್ಲೇ ಬಿಜೆಪಿ ರಾಜ್ಯಕಾರ್ಯಕಾರಿಣೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ಕುರಿತು ಚರ್ಚೆ ನಡೆಯಲಿದೆ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next