Advertisement
ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾ| ಸತೀಶ್ ಚಂದ್ರ ಶರ್ಮ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
Related Articles
Advertisement
ಇದಕ್ಕೂ ಮುನ್ನ ಅರ್ಜಿದಾರೆ ಗೀತಾ ಮಿಶ್ರಾ ಪರ ವಕೀಲ ಜಿ.ಆರ್. ಮೋಹನ್ ಅವರು ರಮೇಶ್ ಜಾರಕಿಹೊಳಿ ಪ್ರಕರಣ ಸಂಬಂಧ ಮಾ.2ರಂದು ದಿನೇಶ್ ಕಲ್ಲಳ್ಳಿ ದೂರು ದಾಖಲಿಸಿದ ಕ್ಷಣದಿಂದ ಮಾ.13ರ ವರೆಗೆ ನಡೆದ ಬೆಳವಣಿಗೆಗಳ ಬಗ್ಗೆ ನ್ಯಾಯಪೀಠಕ್ಕೆ ವಿವರಿಸಿದರು.
ಮಾ.2ರಿಂದ ಮಾ.13ರವರೆಗೆ ಪ್ರಕರಣ ಸಂಬಂಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ಹೀಗಾಗಿ, ಪ್ರಕರಣದ ತನಿಖೆ ನಡೆಸಲು ಎಸ್‌ಐಟಿಗೆ ಯಾವುದೇ ಅಧಿಕಾರವಿಲ್ಲ. ರಮೇಶ್ ಜಾರಕಿಹೊಳಿ ಮಾ.13ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಿನೇಶ್ ಕಲ್ಲಳ್ಳಿ ಅವರ ದೂರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಇದರಿಂದ ಕಬ್ಬನ್ ಪಾರ್ಕ್ ಮತ್ತು ಸದಾಶಿವ ಠಾಣಾ ಪೊಲೀಸರಿಗೆ ಮಾತ್ರ ಪ್ರಕರಣದ ತನಿಖೆ ನಡೆಸುವ ಅಧಿಕಾರವಿದೆ. ಎಸ್‌ಐಟಿಗೆ ತನಿಖೆ ಮೇಲ್ವಿಚಾರಣೆ ನಡೆಸುವ ಅಧಿಕಾರವೂ ಇಲ್ಲ ಎಂದು ತಿಳಿಸಿದರು.
ಇಂದಿರಾ ಜೈಸಿಂಗ್ ಅವರು, ಹಿಂದಿನ ಗೃಹ ಸಚಿವರ ಪತ್ರ ಬರೆದು ನಿರ್ದೇಶಿಸಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದರು. ಎಸ್‌ಐಟಿ ರಚಿಸುವಂತೆ ನಿರ್ದೇಶಿಸುವ ಅಧಿಕಾರ ಗೃಹ ಸಚಿವರಿಗೆ ಇಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.