ಬೆಳಗಾವಿ: ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಮೇಶ್ ಜಾರಕಿಹೊಳಿ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಎರಡುವಾರಗಳ ಕಾಲ ಮನೆಯಲ್ಲಿಯೇ ಕ್ವಾರೈಂಟೈನಲ್ಲಿರಬೇಕು ಎಂದು ಕೋವಿಡ್ ಆಸ್ಪತ್ರೆಯ ವೈದರು ತಿಳಿಸಿದ್ದಾರೆ.
ಎ.1ರಂದು ರಮೇಶ್ ಜಾರಕಿಹೊಳಿಯವರಿಗೆ ಕೋವಿಡ್ 19 ಸೋಂಕು ದೃಢವಾಗಿತ್ತು. ಎ.4ರಂದು ರಾತ್ರಿ ಉಸಿರಾಟದ ಸಮಸ್ಯೆ ಕಂಡುಬಂದು ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ
ಎ.5ರಂದು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್ ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಸಚಿವ ಬೈರತಿ ಬಸವರಾಜ ಅವರು ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇದೆ ಎಂದು ಹೇಳಿದ್ದರು. ಬಳಿಕ ರಮೇಶ್ ಜಾರಕಿಹೊಳಿ ಅವರು ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿತ್ತು.
ಎ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ರಮೇಶ್ ಜಾರಕಿಹೊಳಿಯವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎನ್ನಲಾಗಿದೆ.