ಕಲಬುರಗಿ: ಕಾಂಗ್ರೆಸ್ ಪಕ್ಷದಲ್ಲಿ ಈಗ ಎಲ್ಲರೂ ನಿಷ್ಠರೇ ಇದ್ದಾರೆ. ಯಾರೂ ಪಕ್ಷ ಬಿಟ್ಟು ಹೋಗುವವರಿಲ್ಲ. ಕಾಂಗ್ರೆಸ್‌ನ ಐವರು ಶಾಸಕರು ಸಂಪರ್ಕದಲ್ಲಿದ್ದಾರೆಂದು ಸಚಿವ ರಮೇಶ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಅವರೇ ನಮ್ಮ ಪಕ್ಷದ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಅತೃಪ್ತಿ ಹೆಚ್ಚಾಗುತ್ತಿದೆ. ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರು ಅಧಿಕಾರಕ್ಕಾಗಿ ಪಟ್ಟು ಹಿಡಿದಿದ್ದಾರೆ. ಅವರ ಅತೃಪ್ತಿ ಯಾವಾಗ ಹೊರ ಬೀಳುತ್ತದೆಯೋ ಗೊತ್ತಿಲ್ಲ. ಕಾಂಗ್ರೆಸ್ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ, ತನ್ನ ಜಬಾವ್ದಾರಿ ನಿಭಾಯಿಸುತ್ತದೆ ಎಂದರು.
ಸೋನಿಯಾ ಗಾಂಧಿ ಎಲ್ಲರೊಂದಿಗೆ ಚರ್ಚಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ತಂಡ ಕಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭ ಜೂ.7ಕ್ಕೆ ಸರಳವಾಗಿ ಗ್ರಾಮ ಮಟ್ಟಕ್ಕೂ ತಲುಪುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ, ಲಾಕ್‌ಡೌನ್ ಮಾರ್ಗಸೂಚಿ ಪ್ರಕಾರ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಹೀಗಾಗಿ ಜೂ.8ರಂದು ಮತ್ತೂಂದು ಸುತ್ತಿನ ಸಭೆ ನಡೆಸಿ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದರು.