Advertisement
ಕೋವಿಡ್-19 ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಪೊಲೀಸರಿಗೆ ಸೋಂಕು ದೃಢಪಟ್ಟರೆ ಮನೆಯಲ್ಲಿಯೇ ಚಿಕಿತ್ಸೆ ನೀಡುವುದು ಉತ್ತಮ. ಅದೇ ರೀತಿ ಸಾರ್ವಜನಿಕರಿಗೆ ಸೋಂಕು ದೃಢಪಟ್ಟರೆ ಮನೆಯಲ್ಲಿ ಚಿಕಿತ್ಸೆ ನೀಡುವುದು ಉತ್ತಮವಾಗಿರುತ್ತದೆ. ಮನೆಯಲ್ಲಿ ಚಿಕಿತ್ಸೆ ನೀಡುವುದರಿಂದ ಅವರಿಗೆ ಒಳ್ಳೆಯ ಆಹಾರದ ಜೊತೆಗೆ ಕುಟುಂಬ ಸದಸ್ಯರಿಂದ ಧೈರ್ಯ ಸಿಗುತ್ತದೆ ಎಂದು ತಿಳಿಸಿದರು.
ಶೇ.60 ಕೋವಿಡ್ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗೆ ಸರಿಯಾದ ಆಹಾರ ನೀಡಬೇಕು. ಕೋವಿಡ್ ಹತೊಟಿಗೆ ಬಂದಿದೆ. ಆದಾಗ್ಯೂ ಅಧಿಕಾರಿಗಳು ಇನ್ನು ಹೆಚ್ಚು ಕೆಲಸ ಮಾಡಬೇಕು. 15 ದಿನಗಳ ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಬೇರೆ ಬೇರೆ ರೋಗಿಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು, ಜಿಲ್ಲಾಸ್ಪತ್ರೆಯಲ್ಲಿ 700 ಬೆಡ್ ಗಳಿದ್ದು, ಆಕ್ಸಿಜನ್ ವ್ಯವಸ್ಥೆ ಕೂಡ ಇದೆ. ಜಿಲ್ಲೆಗೆ 54 ವೆಂಟಿಲೇಟರ್ ಬಂದಿದ್ದು, ಅದರಲ್ಲಿ 20 ವೇಂಟಿಲೆಟರ್ ಜಿಲ್ಲಾಸ್ಪತ್ರೆಗೆ ನೀಡಲಾಗಿದೆ. ಉಳಿದ ವೆಂಟಿಲೇಟರ್ ತಾಲೂಕುಗಳಿಗೆ ನೀಡಲಾಗಿದೆ ಎಂದು ಸಚಿವರಿಗೆ ಮಾಹಿತಿಯನ್ನು ನೀಡಿದರು.
ಬೆಳಗಾವಿ ಜಿಲ್ಲೆ ಹಾಗೂ ಉಳಿದ ಜಿಲ್ಲೆಯ ಸಾವಿನ ಸರಾಸರಿ ನೋಡಿದರೆ ಬೆಳಗಾವಿಯಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ ಎಂದರು.
ಸೋಂಕಿತರು ಬಯಸಿದಲ್ಲಿ ಚಿಕಿತ್ಸೆ ಪಡೆಯಬಹುದು. ಇದರಿಂದ ಸರ್ಕಾರಿ ಆಸ್ಪತ್ರೆಗೆ ಕಡಿಮೆ ಹೊರೆ ಆಗತ್ತದೆ ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಅವರು, ತಾಲೂಕು ಹಾಗೂ ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿಗತಿ ಬಗ್ಗೆ ವಿವರಣೆ ನೀಡಿದರು. ಸೋಂಕಿನಿಂದ ಬಳಲುತ್ತಿದ್ದ 140 ಜನ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳ ಕೋವಿಡ್-19 ವರದಿ ನೆಗೆಟಿವ್ ಬಂದಿರುತ್ತದೆ ಎಂದು ಹೇಳಿದರು.
ಈ ಬಾರಿ ಪ್ರವಾಹದಿಂದ ಸಮಸ್ಯೆ ಇಲ್ಲ: ಪ್ರವಾಹದಿಂದ ಈ ಬಾರಿ ಸಮಸ್ಯೆ ಆಗಿಲ್ಲಾ ಆದರು ರೈತರಿಗೆ ಬೆಳೆ ಪರಿಹಾರ ನೀಡಲು ಜಂಟಿಯಾಗಿ ಬೆಳ ಸಮಿಕ್ಷೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಹದಿಂದ 1160 ಕೋಟಿ ನಷ್ಟ ಆಗಿದ್ದು, ಪ್ರವಾಹದ ಸಮೀಕ್ಷೆಗೆ ಕೇಂದ್ರ ತಂಡ ಭೇಟಿ ನೀಡಲಿದೆ. ಸದ್ಯದ ಮಟ್ಟಿಗೆ ಪ್ರವಾಹ ನಿಯಂತ್ರಣದಲ್ಲಿದೆ. ರೈತರಿಂದ ಬೆಳೆ ಸಮೀಕ್ಷೆ ನಡೆಯುತ್ತಿದ್ದು, ರಾಜ್ಯದಲ್ಲಿ ಜಿಲ್ಲೆಯ ರೈತರು ಹೆಚ್ಚು ಸಮೀಕ್ಷೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸಚಿವರಿಗೆ ತಿಳಿಸಿದರು.
ನಗರ ಪೋಲಿಸ್ ಆಯುಕ್ತ ಡಾ. ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಿ.ಇ.ಒ. ದರ್ಶನ ಎಚ್.ವ್ಹಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್ ಸೇರಿದಂತೆ ಮತ್ತಿತರರು ಇದ್ದರು.