ಬೆಂಗಳೂರು: ವಿಜಯನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಆರಂಭವಾಗುವುದಕ್ಕೆ ಮುನ್ನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾರ್ಯಕಾರಿಣಿಗೆ ತೆರಳುವ ಮುನ್ನ ಆರ್ ಟಿ ನಗರದಲ್ಲಿರುವ ಬೊಮ್ಮಾಯಿ ನಿವಾಸದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನದ ರೇಸ್ ನಲ್ಲಿ ಇರುವ ರಮೇಶ್ ಜಾರಕಿಹೊಳಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆಯೋ ಅಥವಾ ರಾಜಕೀಯ ಸಂಬಂಧಿ ಚರ್ಚೆ ನಡೆದಿದೆಯೋ ಎಂಬುದು ಬಹಿರಂಗಗೊಂಡಿಲ್ಲ.
ಇದನ್ನೂ ಓದಿ:ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಆ ನಾಲ್ಕನೇ ವ್ಯಕ್ತಿ ಯಾರು?
ರಾಜ್ಯ ಸರಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ವಿರುದ್ಧ ರಮೇಶ್ ಜಾರಕಿಹೊಳಿ ಮಹತ್ವದ ದಾಖಲೆ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅವರು ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ಈ ಬಳಿಕ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.