Advertisement

ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ: ಸಹೋದರನಿಗೆ ಪರಿಷತ್ ಟಿಕೆಟ್ ಗೆ ಲಾಬಿ

03:50 PM Nov 13, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಆರ್ ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಜೊತೆಗೆ ಸಹೋದರ ಲಖನ್ ಜಾರಕಿಹೊಳಿ ಸಹ ಆಗಮಿಸಿದ್ದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರನಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ರಮೇಶ್ ಆಗಮಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಶ್ರೀಕಿಯಿಂದ ಅಂದು ಕಾಂಗ್ರೆಸ್ಸಿಗರು ಏನು ನಿರೀಕ್ಷೆ‌ ಮಾಡಿದ್ದರು ?: ಗೃಹ ಸಚಿವರ ಪ್ರಶ್ನೆ

ಸುಮಾರು ಅರ್ಧ ಗಂಟೆಗಳ ಕಾಲ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದ ಅವರು, ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ಬೆಳಗಾವಿಯಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಬೇಡಿಕೆ ಇಟ್ಟಿದ್ದಾರೆ.

ಹಾಲಿ ಸದಸ್ಯ ಮಹಂತೇಶ್ ಕವಟಗಿ ಮಠ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿ ಈಗಾಗಲೇ ತಯಾರಿ ನಡೆಸಿದ್ದಾರೆ. ಕ್ಷೇತ್ರದಲ್ಲಿ ಪ್ರಚಾರವನ್ನೂ ಸಹ ಆರಂಭಿಸಿದ್ದಾರೆ. ಇದರ ನಡುವೆಯೇ ಜಾರಕಿಹೊಳಿ ತಮ್ಮ ಸಹೋದರನಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ.

Advertisement

ಬೆಳಗಾವಿಯು ದ್ವಿಸದಸ್ಯ ಕ್ಷೇತ್ರವನ್ನು ಹೊಂದಿದ್ದು ಸ್ಥಳೀಯ ಸಂಸ್ಥೆಗಳಿಂದ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಈಗಿರುವ ಬಲಾಬಲದ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನವನ್ನು ಗೆಲ್ಲುವ ಸಾಮಥ್ರ್ಯ ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next