ಬೆಳಗಾವಿ: ನಿನ್ನೆಯಷ್ಟೇ ಮೈಸೂರಿನಲ್ಲಿ ಸುತ್ತೂರು ಶ್ರೀ ಗಳನ್ನು ಭೇಟಿಯಾಗಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಅಥಣಿಯಲ್ಲಿ ಅರ್ ಎಸ್ಎಸ್ ಮುಖಂಡರನ್ನು ಭೇಟಿಯಾಗಿದ್ದಾರೆ. ಜಾರಕಿಹೊಳಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಶನಿವಾರ ಬೆಳಿಗ್ಗೆ ಅಥಣಿಗೆ ಆಗಮಿಸಿದ ರಮೇಶ ಜಾರಕಿಹೊಳಿ ಅರ್ ಎಸ್ಎಸ್ ಉತ್ತರ ಪ್ರಾಂತ ಸಂಚಾಲಕ ಅರವಿಂದ ದೇಶಪಾಂಡೆ ಅವರನ್ನು ಭೇಟಿ ಮಾಡಿದ್ದಾರೆ.
ಈ ಭೇಟಿಯ ಸಮಯದಲ್ಲಿ ಪ್ರಸ್ತುತ ರಾಜಕೀಯ ಸ್ಥಿತಿಗತಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ತಮ್ಮ ಭೇಟಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ರಮೇಶ ಜಾರಕಿಹೊಳಿ ನಿರಾಕರಿಸಿದರು.
ಇದನ್ನೂ ಓದಿ:ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್
ಕೆಲವು ವಿಚಾರಗಳಿಂದ ನೊಂದು ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ರಮೇಶ್ ಜಾರಕಿಹೊಳಿ ಮೈಸೂರಿನಲ್ಲಿ ಹೇಳಿದ್ದರು.
ಬಿಜೆಪಿಯಲ್ಲೇ ಕೆಲವರಿಂದ ನನಗೆ ಅನ್ಯಾಯವಾಗಿದ್ದು, ಅವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ. ಯಾರಿಂದ ಅನ್ಯಾಯಆಗಿದೆ ಎಂಬುದನ್ನು ಈಗಲೇ ಹೇಳುವುದಿಲ್ಲ. 8-10 ದಿನಗಳಲ್ಲಿ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ಶುಕ್ರವಾರ ಹೇಳಿದ್ದರು.