Advertisement

ರಮೇಶ್‌ ಜಾರಕಿಹೊಳಿ ಭೇಟಿಯಾದ ಪಕ್ಷೇತರರು

03:00 AM May 30, 2019 | Sriram |

ಬೆಂಗಳೂರು: ಮೈತ್ರಿ ಸರ್ಕಾರದ ಭವಿಷ್ಯದಲ್ಲಿ ಮಹತ್ವದ ಪಾತ್ರ ವಹಿಸಲಿರುವ ಇಬ್ಬರು ಪಕ್ಷೇತರ ಶಾಸಕರು ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಕಾಣಿಸಿ ಕೊಂಡು ಕುತೂಹಲ ಮೂಡಿಸಿದ್ದಾರೆ.

Advertisement

ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ರಾಜ್ಯದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಿ ಸುತ್ತಿದ್ದು, ಬಿಜೆಪಿಯವರ ‘ಆಪರೇಷನ್‌ ಕಮಲ’ದಿಂದ ತಪ್ಪಿಸಿಕೊಳ್ಳಲು ಇಬ್ಬರು ಪಕ್ಷೇತರ ಶಾಸಕರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳಲು ಮೈತ್ರಿ ಪಕ್ಷಗಳ ನಾಯಕರು ಕಸರತ್ತು ನಡೆಸಿದ್ದಾರೆ. ಅಲ್ಲದೇ ಈಗಾಗಲೇ ಆರ್‌.ಶಂಕರ್‌ ಹಾಗೂ ನಾಗೇಶ್‌ ಅವರಿಗೆ ಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಎರಡೂ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿ ಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ನಡುವೆಯೇ ಇಬ್ಬರೂ ಶಾಸಕರು ಕಾಂಗ್ರೆಸ್‌ನ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು, ಮೈತ್ರಿ ಪಕ್ಷಗಳ ನಾಯಕರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದ್ದು, ಸರ್ಕಾರಕ್ಕೆ ಬೆಂಬಲ ಕೊಡಲು ಇಬ್ಬರೂ ಪಕ್ಷೇತರ ಶಾಸಕರು ಸಿದ್ಧರಾಗಿದ್ದಾರೆ. ಅವರ ಮೂಲಕವೇ ಕಾಂಗ್ರೆಸ್‌ನ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಅವರ ಮನವೊಲಿಸಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಿ ಬಿಜೆಪಿಗೆ ಹೋಗದಂತೆ ಮನವಿ ಮಾಡಲು ರಾಜ್ಯ ಮೈತ್ರಿ ಪಕ್ಷಗಳ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next