Advertisement

ರಮೇಶ ಜಾರಕಿಹೊಳಿ ಕೃಪೆಯಿಂದಲೇ ಬಿಜೆಪಿ ಸರ್ಕಾರ

09:35 AM Nov 19, 2019 | Sriram |

ಗೋಕಾಕ: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲಿದ್ದು, ರಮೇಶ ಜಾರಕಿಹೊಳಿ ಅವರ ಕೃಪೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಮುಂಚೆ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದ ಆವರಣದಲ್ಲಿ ನಡೆದ ಬೃಹತ್‌ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಬೇಸತ್ತು, ಅದರಲ್ಲಿ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಮತ್ತು ಶಾಸಕರು ಪದತ್ಯಾಗ ಮಾಡಿ, ಕೋರ್ಟು-ಕಚೇರಿ ಅಲೆದು ಸಾಕಷ್ಟು ವನವಾಸ ಅನುಭವಿಸಿದ್ದಾರೆ. ಅವರು ಕೈಗೊಂಡ ದಿಟ್ಟ ನಿರ್ಧಾರದಿಂದಾಗಿಯೇ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಿಂತು ದಾಖಲೆಯ ಜಯಕ್ಕೆ ಶ್ರಮಿಸಬೇಕೆಂದು ಕೋರಿದರು.

ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಇಬ್ಬರು ಸಹೋದರರ ಮಧ್ಯ ಮೂರನೇ ವ್ಯಕ್ತಿ ಲಾಭ ತೆಗೆದುಕೊಳ್ಳಬಹುದೆಂಬುದನ್ನು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಈ ಚುನಾವಣೆಯಲ್ಲಿ ಮೂರನೇ ವ್ಯಕ್ತಿಗೆ ಲಾಭವಾಗುವುದಿಲ್ಲ. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಗೆಲುವು ಶತಸಿದ್ಧ. ನನ್ನ ಭವಿಷ್ಯ ಎಂದಿಗೂ ಸುಳ್ಳಾಗದು. ಈ ಗೆಲುವಿನಿಂದ ಗೋಕಾಕ ಇತಿಹಾಸದ ಪುಟಗಳಲ್ಲಿ ಸ್ವಾತಂತ್ರÂ ನಂತರ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾ ಧಿಸಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ನಮ್ಮ ಎನ್‌ಎಸ್‌ಎಫ್‌ ಕಚೇರಿಯಿಂದ ಪ್ರಚಾರ ಪ್ರಾರಂಭಿಸಿರುವ ರಮೇಶ ಜಾರಕಿಹೊಳಿ ಅವರ ಗೆಲುವನ್ನು ಯಾರೂ ತಡೆಯಲಾರರು. ಈ ನೆಲದ ಶಕ್ತಿ ಅಪಾರ. ಇದಕ್ಕೆ ನಾನೇ ಸಾಕ್ಷಿ. ಐದು ಬಾರಿ ಗೆಲುವು ಸಾಧಿಸಿರುವುದು ಈ ನೆಲದಿಂದಲೇ. ಜೊತೆಗೆ ಈ ಚುನಾವಣೆಯಲ್ಲಿ ಒಂದು ಮತದಿಂದ ಎರಡು ಅಧಿಕಾರಗಳು ಸಿಗುತ್ತವೆ. ಒಂದು ಶಾಸಕರಾದರೆ ಇನ್ನೊಂದು ಸಚಿವರಾಗುತ್ತಾರೆ. ಆದ್ದರಿಂದ ರಮೇಶ ಜಾರಕಿಹೊಳಿ ಅವರನ್ನು ಆರಿಸಿ ಕಳುಹಿಸಿದರೆ ಸರ್ಕಾರದಲ್ಲಿ ಮಹತ್ವದ ಖಾತೆ ದೊರಕಲಿದೆ. ಇದರಿಂದ ನಮ್ಮ ಭಾಗಕ್ಕೆ ಸಾಕಷ್ಟು ಅಭಿವೃದ್ಧಿ ಯೋಜನೆಗಳು ಬರಲಿವೆ ಎಂದು ಹೇಳಿದರು.

Advertisement

ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಮತಯಾಚಿಸಿದರು. ಹಿರಿಯ ಶಾಸಕರಾದ ಉಮೇಶ ಕತ್ತಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಎ.ಎಸ್‌.ಪಾಟೀಲ(ನಡಹಳ್ಳಿ), ಅನೀಲ ಬೆನಕೆ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಎಂ.ವಿ. ನಾಗರಾಜ್‌, ಯುವ ಮುಖಂಡ ಅರುಣ ಕಾರಜೋಳ, ಬೆಳಗಾವಿ ವಿಭಾಗೀಯ ಪ್ರಭಾರಿ ಈರಪ್ಪ ಕಡಾಡಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್‌.ವಿ. ದೇಮಶೆಟ್ಟಿ, ಗ್ರಾಮೀಣ ಅಧ್ಯಕ್ಷ ವಿರುಪಾಕ್ಷಿ ಯಲಿಗಾರ, ಮುಖಂಡ ಎಸ್‌.ಎ. ಕೋತವಾಲ, ಪಕ್ಷದ ಹಲವು ಮುಖಂಡರು, ಬಿಜೆಪಿ ರಾಜ್ಯ, ಜಿಲ್ಲಾ ಹಾಗೂ ತಾಲೂಕಾ ಪದಾಧಿ ಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎನ್‌ಎಸ್‌ಎಫ್‌ ಅತಿಥಿ ಗೃಹದಿಂದ ಬೃಹತ್‌ ಮೆರವಣಿಗೆ ನಡೆಯಿತು. ಸಹಸ್ರಾರು ಬಿಜೆಪಿ ಕಾರ್ಯಕರ್ತರ ಘೋಷಣೆ ಮಧ್ಯೆ ತೆರೆದ ವಾಹನದಲ್ಲಿ ಅಭ್ಯರ್ಥಿ ರಮೇಶ ಜಾರಕಿಹೊಳಿ, ಹಲವು ನಾಯಕರು ಸಾಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧ ಕಾರ್ಯಾಲಯಕ್ಕೆ ತೆರಳಿ ಚುನಾವಣಾ ಧಿಕಾರಿಗೆ ನಾಮಪತ್ರ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next