Advertisement

ದೆಹಲಿಯಲ್ಲಿಯೂ ಮರಾಠಾ ಅಸ್ತ್ರ ಪ್ರಯೋಗಿಸಿದ ರಮೇಶ್ ಜಾರಕಿಹೊಳಿ

11:31 AM Dec 07, 2022 | Team Udayavani |

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ತಯಾರಿಗೆ ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಜೋರಾದ ಕಸರತ್ತು ನಡೆಸಿದ್ದು, ಅತಿ ಹೆಚ್ಚು ಮರಾಠಾ ಸಮಾಜದವರನ್ನು ಹೊಂದಿರುವ ಗ್ರಾಮೀಣದಲ್ಲಿ ಬಿಜೆಪಿ ಟಿಕೆಟ್ ಮರಾಠಾ ಸಮುದಾಯದ ಅಭ್ಯರ್ಥಿಗೇ ನೀಡುವಂತೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರಲ್ಲಿ ಮನವಿ ಮಾಡಿದ್ದಾರೆ.

Advertisement

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಮಣಿಸಲು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಲವು ಕಾರ್ಯತಂತ್ರ ರೂಪಿಸುತ್ತಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ, ಹುಬ್ಬಳ್ಳಿಗೆ ಈಗ ದೆಹಲಿಗೆ ಮರಾಠಾ ಅಸ್ತ್ರದ ನಿಯೋಗ ಕರೆದೊಯ್ದು ತಮ್ಮ ಬಿತ್ತಳೆಕೆಯಲ್ಲಿರುವ ಒಂದೊಂದೇ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ.

ದೆಹಲಿಯಲ್ಲಿ ಬುಧವಾರ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮನ್ನೋಳಕರ ಹಾಗೂ ಬಿಜೆಪಿ ಮುಖಂಡ ಕಿರಣ ಜಾಧವ ಅವರೊಂದಿಗೆ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು. ಜತೆಗೆ ದೆಹಲಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರ ಜನ್ಮದಿನದಂದು ಅವರಿಗೆ ಶುಭಾಶಯ ಕೋರಿದರು.‌‌

ಇದನ್ನೂ ಓದಿ: ಡಿ.20 ರಂದು ಮೂಡಲಗಿ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯ ಆರಂಭ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕಾದರೆ ಮರಾಠಾ ಸಮಾಜದ ಮತಗಳು ನಿರ್ಣಾಯಕವಾಗಿವೆ. ಈ ನಿಟ್ಟಿನಲ್ಲಿ ಇಲ್ಲಿಯವರೆಗೆ ಮರಾಠಾ ಸಮಾಜದ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇದರಿಂದ ಈ ಭಾಗದ ಮತದಾರರು ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ ಭದ್ರ ಕೋಟೆಯಾದ ಈ ಕ್ಷೇತ್ರವನ್ನು ಕಾಂಗ್ರೆಸ್ ನಿಂದ‌ ಕಸಿದುಕೊಳ್ಳಬೇಕಾದರೆ ಮರಾಠಾ ಅಭ್ಯರ್ಥಿಯಾಗಿ ನಾಗೇಶ ಮನ್ನೋಳಕರ ಅವರ ಹೆಸರನ್ನು ಪರಿಗಣಿಸಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

Advertisement

ಶೇ.‌70ರಷ್ಟು ಮರಾಠಾ ಸಮಾಜದ ಜನರು ಈ ಭಾಗದಲ್ಲಿ ಇದ್ದಾರೆ. ಇವರಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ. ಮುಂದಿನ ದಿನಗಳಲ್ಲಿ ಇದು ಬಿಜೆಪಿಗೆ ವರವಾಗಲಿದೆ ಎಂದು ಅರುಣ ಸಿಂಗ್ ಅವರಿಗೆ ತಿಳಿಸಿದರು.

ರಮೇಶ ಜಾರಕಿಹೊಳಿ ಅವರು ಕೆಲ‌ ದಿನಗಳ ಹಿಂದೆಯಷ್ಟೇ ನಾಗೇಶ ಮನ್ನೋಳಕರ ಅವರನ್ನು ಕರೆದುಕೊಂಡು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಭೇಟಿ ಮಾಡಿಸಿ ಚರ್ಚಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next