Advertisement

ಬಿಜೆಪಿ ಶಾಸಕರಿಂದ ರಮೇಶ್‌ ಜಾರಕಿಹೊಳಿ ಭೇಟಿ​​​​​​​

06:00 AM Dec 01, 2018 | |

ಬೆಂಗಳೂರು: ಬಿಜೆಪಿ ಶಾಸಕರಾದ ಸಿದ್ದು ಸವದಿ ಹಾಗು ಪರಣ್ಣ ಮುನವಳ್ಳಿ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Advertisement

ರಮೇಶ್‌ ಜಾರಕಿಹೊಳಿ ಈಗಲೂ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಶುಕ್ರವಾರ ಬಿಜೆಪಿಯ ಶಾಸಕರು ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿರುವುದು ತೀವ್ರ ಕುತೂಲಹ ಮೂಡಿಸಿದೆ.
ಆದರೆ, ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳ ಕೆಲಸದ ವಿಚಾರವಾಗಿ ಸಚಿವರೊಂದಿಗೆ ಮಾತನಾಡಲು ಬಂದಿದ್ದು, ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಬೆಳವಣಿಗೆಗಳ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವ ರಮೇಶ್‌ ಜಾರಕಿಹೊಳಿ, ನಾನು ಎಲ್ಲಿಗೂ ಹೋಗಿಲ್ಲ, ಹೋಗುವುದೂ ಇಲ್ಲ. ಕಾಂಗ್ರೆಸ್‌ನ ಸ್ವಯಂ ಘೋಷಿತ ಪ್ರಭಾವಿ ನಾಯಕರು ನನ್ನ ಹೆಸರು ಹಾಳು ಮಾಡಲು ಈ ರೀತಿಯ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಸಮಸ್ಯೆ ಇದ್ದಿದ್ದು ನಿಜ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅದನ್ನು ಬಗೆ ಹರಿಸಿದ್ದಾರೆ. ನಾನು ಈಗ ಯಾವುದೇ ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿಲ್ಲ.ನಾನು ಮುಂಬೈಗೂ ಹೋಗಿಲ್ಲ. ಎಲ್ಲಿಯೂ ಹೋಗಿಲ್ಲ. ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದೇನೆ. ಮಾಧ್ಯಮಗಳಲ್ಲಿ ನನ್ನ ಹೆಸರು ಪದೇ ಪದೇ ಯಾಕೆ ಪ್ರಸ್ತಾಪವಾಗುತ್ತಿದೆಯೋ ಗೊತ್ತಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next