Advertisement
ರಮೇಶ್ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ.ಕ್ಷೇತ್ರ ಪುನರ್ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ ಆರಂಭದಲ್ಲಿ ಅಷ್ಟು ಹೆಸರು ಮಾಡಿರಲಿಲ್ಲ.
Related Articles
Advertisement
ಕಾಂಗ್ರೆಸ್‌ನಿಂದ ಹಾಲಿ ಶಾಸಕರಿಗೆ ಟಿಕೆಟ್ ಎಂದು ಈಗಾಗಲೇ ಹೇಳಿರುವುದರಿಂದ ಹೆಬ್ಬಾಳ್ಕರ್ ಯಾವುದೇ ಆತಂಕವಿಲ್ಲದೆ ಪ್ರಚಾರ ನಡೆಸಿದ್ದಾರೆ. ಜೆಡಿಎಸ್‌ದಿಂದ ಯಾರ ಹೆಸರೂ ಪ್ರಸ್ತಾವವಾಗಿಲ್ಲ.ಮಹಾರಾಷ್ಟ್ರ ಏಕೀಕರಣ ಸಮಿತಿ ಯಿಂದ ಮಾಜಿ ಶಾಸಕ ಮನೋಹರ ಕಿಣೇಕರ ಮತ್ತು ಮಾಜಿ ಮಹಾಪೌರ ಶಿವಾಜಿ ಸುಂಠಕರ ಪ್ರಯತ್ನ ನಡೆಸಿದ್ದಾರೆ.
ಮರಾಠಿ ಭಾಷಿಕರಿಗೆ ಮಣೆಈ ಕ್ಷೇತ್ರದಲ್ಲಿ ಮರಾಠಿ ಭಾಷಿಕರು ನಿರ್ಣಾಯಕರಾಗಿದ್ದಾರೆ. ಅವರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಬಿಜೆಪಿ ಮರಾಠಿ ಭಾಷಿಕ ಅಭ್ಯರ್ಥಿಗೆ ಮಣೆ ಹಾಕಲು ಉದ್ದೇಶಿಸಿದೆ. ಇದೇ ಕಾರಣದಿಂದ ರಮೇಶ್ ಜಾರಕಿಹೊಳಿ ತಮ್ಮ ಆಪ್ತ ನಾಗೇಶ ಮುನ್ನೋಳಕರ ಅವರ ಹೆಸರು ಮುಂದೆ ಮಾಡಿದ್ದಾರೆ. ಬಿಜೆಪಿ ಮರಾಠಾ ಅಸ್ತ್ರ ಬಳಸಿ ಕಾಂಗ್ರೆಸ್ ಸದೆ ಬಡಿಯಲು ಎಲ್ಲ ರೀತಿಯ ಕಸರತ್ತು ನಡೆಸಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಶಾಸಕರು ನಿರಂತರ ಜನಸಂಪರ್ಕ ಮತ್ತು ತಾವು ಮಾಡಿದ ಕಾರ್ಯಗಳನ್ನು ನಂಬಿಕೊಂಡಿದ್ದಾರೆ. ಇದರಲ್ಲಿ ಯಾರ ಕೈ ಮೇಲಾಗುತ್ತದೆ ಎಂಬುದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಹಣದ ಹೊಳೆ-ಕಾಣಿಕೆಗಳ ಮಹಾಪೂರ!
ಚುನಾವಣೆ ದಿನಾಂಕ ಘೋಷಣೆಯ ಮೊದಲೇ ರಾಜ್ಯದ ಅತ್ಯಂತ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತದಾರರ ಎದುರು ಹಣದ ಹೊಳೆ, ಕಾಣಿಕೆಗಳ ಮಹಾಪೂರ ಮತ್ತು ಅಭಿವೃದ್ಧಿ ಕೆಲಸಗಳ ಚಿತ್ರವಿದೆ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಎಲ್ಲರನ್ನೂ ಕಾಡುತ್ತಿದೆ. ಈ ಚುನಾವಣೆಯನ್ನು ಬಹಳ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಹೆಬ್ಟಾಳ್ಕರ್, ವಿರೋಧಿಗಳ ಕಟುವಾದ ಆರೋಪಗಳಿಗೆ ಸಂಯಮದಿಂದಲೇ ಸೂಕ್ಷ್ಮ ಉತ್ತರ ನೀಡುತ್ತಿದ್ದಾರೆ. ಇನ್ನೊಂದು ಕಡೆ ಹೆಬ್ಬಾಳ್ಕರ್ ಅವರನ್ನು ಸೋಲಿಸಲೇ ಬೇಕು ಎಂದು ಪ್ರತಿಜ್ಞೆ ಮಾಡಿದಂತಿರುವ ರಮೇಶ್ ಜಾರಕಿಹೊಳಿ ತಮ್ಮ ಕ್ಷೇತ್ರವಲ್ಲದಿದ್ದರೂ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಅಂತಿಮವಾಗಿ ಯಾರ ಮುಖದಲ್ಲಿ ನಗು ಕಾಣಲಿದೆ ಎಂಬುದು ಕುತೂಹಲ ಮೂಡಿಸಿದೆ. -ಕೇಶವ ಆದಿ