Advertisement

ದಲಿತರು ಬಿಜೆಪಿ ರಾಜ್ಯಾಧ್ಯಕ್ಷ ಆಗಬಾರದೇ: ರಮೇಶ ಜಿಗಜಿಣಗಿ ಪ್ರಶ್ನೆ

09:59 PM Jun 25, 2023 | Team Udayavani |

ಬೆಳಗಾವಿ: ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ. ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷನಾಗುತ್ತೇನೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ಅದನ್ನು ಬಹಿರಂಗವಾಗಿ ಹೇಳುವುದಿಲ್ಲ ಎಂದರು.

ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ರಾಜ್ಯದಲ್ಲಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಯಾರೂ ಸಿಗುತ್ತಿಲ್ಲ ಎಂದೇನಿಲ್ಲ. ಬಿಜೆಪಿಯಲ್ಲಿ ಗೊಂದಲ ಇಲ್ಲ. ಒಳ್ಳೆಯ ರೀತಿಯಲ್ಲಿ ಎರಡೂ ಸ್ಥಾನಗಳನ್ನು ವರಿಷ್ಠರು ಘೋಷಿಸುತ್ತಾರೆ. ಸಮರ್ಥ ನಾಯಕತ್ವ, ಸಂಘಟನಾ ಕೌಶಲವಿರುವ ನಾಯಕರು ನಮ್ಮಲ್ಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next