ಬೆಂಗಳೂರು: ಕಳೆದ 14 ತಿಂಗಳ ಕಾಲ ನಾನು ಸಂವಿಧಾನಬದ್ಧವಾಗಿ, ಆತ್ಮಸಾಕ್ಷಿಯಾಗಿ ಅನುಗುಣವಾಗಿ ಮೈತ್ರಿ ಸರಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಸರಕಾರಕ್ಕೆ ಬಹುಮತ ಇಲ್ಲದ ಕಾರಣ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಕುಮಾರ್ ತಿಳಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ನಾನೆಂದೂ ಯಾವುದನ್ನೂ ಬಯಸಿದವನಲ್ಲ. ಇಲಾಖೆಯ ಎಲ್ಲಾ ಸಿಬ್ಬಂದಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸದನದಲ್ಲಿ ನನ್ನದೊಂದು ಮನವಿ ಚುನಾವಣಾ ವ್ಯವಸ್ಥೆ ಸುಧಾರಣೆ ಅಗತ್ಯ, ಈ ಬಗ್ಗೆ ಕೇಂದ್ರವನ್ನು ಒತ್ತಾಯಿಸೋಣ ಎಂದರು.
ಯಾರ ಒತ್ತಡಕ್ಕೂ ಮಣಿದಿಲ್ಲ, ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. 10ನೇ ಶೆಡ್ಯೂಲ್ ಪುನರ್ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕು. ಈ ನಿಟ್ಟಿನಲ್ಲಿ ನಾವು ಆಲೋಚಿಸಬೇಕಾಗಿದೆ. ಲೋಕಾಯುಕ್ತ ಕಾನೂನು ಸಹ ಸುಧಾರಣೆಯಾಗಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ದೇಶದ ಭ್ರಷ್ಟಾಚಾರದ ಮೂಲಗಳು ಚುನಾವಣೆ. ಚುನಾವಣೆಗಳು ಸುಧಾರಣೆಯಾಗದಿದ್ದರೆ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯವಿಲ್ಲ ಎಂದರು.