Advertisement

ಬಿಜೆಪಿ ಸೋಲಿಗೆ ರಮೇಶ ಹೊಣೆ ಅಲ್ಲ: ಲಖನ್‌ ಜಾರಕಿಹೊಳಿ

10:55 PM Dec 15, 2021 | Team Udayavani |

ಗೋಕಾಕ್‌: ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್‌ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದರಿಂದ ಕಾಂಗ್ರೆಸ್‌ ಗೆದ್ದಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿಯ ಕೆಲವು ನಾಯಕರು ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಸೋಲಬೇಕಾಯಿತು ಎಂದು ವಿಧಾನ ಪರಿಷತ್‌ ನೂತನ ಸದಸ್ಯ ಲಖನ್‌ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, 3,500 ಬಿಜೆಪಿ ಮತಗಳು ಕಾಂಗ್ರೆಸ್‌ಗೆ ಬಿದ್ದಿವೆ. 2,400 ಕಾಂಗ್ರೆಸ್‌ ಮತಗಳನ್ನು ಬಿಜೆಪಿಯವರು ಪಡೆದುಕೊಂಡಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ ಜತೆ ಕೈಜೋಡಿಸಿಕೊಂಡು ಅವರ ಮತ ಅವರೇ ಒಡೆದುಕೊಂಡಿದ್ದಾರೆ. ಇನ್ನೊಬ್ಬರ ಮೇಲೆ ಬಿಜೆಪಿ ನಾಯಕರು ಅಪವಾದ ಮಾಡೋದು ತಪ್ಪು. ಬಿಜೆಪಿ ಸೇರ್ಪಡೆ ಬಗ್ಗೆ ನಮ್ಮ ಸಹೋದರರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಬಾಲಚಂದ್ರ, ರಮೇಶ್‌ ಜಾರಕಿಹೊಳಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಉಪ ಚುನಾವಣೆಯಲ್ಲಿ ರಮೇಶ್‌ ಜಾರಕಿಹೊಳಿ ಕೆಲಸ ಮಾಡಿದ್ದಕ್ಕೆ ಬಿಜೆಪಿ ಗೆದ್ದಿದೆ ಎಂದು ಬಿಜೆಪಿ ನಾಯಕರೇ ಹೇಳುತ್ತಾರೆ. ಆಗ ಈ ವಿಚಾರ ಏಕೆ ಬರಲಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಡಬಲ್‌ ಎಂಜಿನ್‌ ಸರ್ಕಾರ ಪರಿಹಾರ ಕೊಡಿಸಲಿ: ಬಂಡೆಪ್ಪ ಕಾಶಂಪೂರ್‌

ಜಿಲ್ಲೆಯಲ್ಲಿ ಬಿಜೆಪಿಯ 13 ಜನ ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯರಿದ್ದಾರೆ. ಸೋತರೆ ರಮೇಶ್‌ ಜಾರಕಿಹೊಳಿ ಕಾರಣ, ಗೆದ್ದರೆ ಅವರೆಲ್ಲ ಕಾರಣ ಅಂದ್ರೆ ಯಾವ ನ್ಯಾಯ? ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ್ದು ರಮೇಶ. ಈಗ ನನ್ನನ್ನು ಗೆಲ್ಲಿಸಿದ್ದು ರಮೇಶ್‌ ಜಾರಕಿಹೊಳಿ ಅಂತ ಅವರು ಹೇಳುತ್ತಾರೆ. ಜಿಲ್ಲೆಯಲ್ಲಿ ಬಿಜೆಪಿ ಬೆಳೆಯಬೇಕೆಂದರೆ ರಮೇಶ್‌ ಜಾರಕಿಹೊಳಿ ಶಕ್ತಿಯನ್ನು ಬಿಜೆಪಿ ಬಳಸಿಕೊಳ್ಳಬೇಕು ಎಂದರು.

ಲಖನ್‌ ಜಾರಕಿಹೊಳಿಯನ್ನು ಬಿಜೆಪಿಗೆ ಸೇರಿಸಿಕೊಳ್ಳುವುದು ಹಾಗೂ ರಮೇಶ್‌ ಮತ್ತು ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ.
-ಆರ್‌. ಅಶೋಕ್‌, ಕಂದಾಯ ಸಚಿವ

Advertisement

ಬೆಳಗಾವಿಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿಲ್ಲ ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿದೆ. ರಮೇಶ್‌ ಜಾರಕಿಹೊಳಿ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ.
-ಸಿ.ಟಿ. ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಹಿಂದುಳಿದ ವರ್ಗಗಳ ನಾಯಕರು ಬೆಳೆಯುತ್ತಿರುವುದರಿಂದ ಸಿದ್ದರಾಮಯ್ಯ ಹತಾಶೆಗೊಳಗಾಗಿದ್ದಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರಿಂದ ಏನೂ ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಏನಾಗಿದೆ, ಏನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ.
-ರಮೇಶ ಜಾರಕಿಹೊಳಿ, ಶಾಸಕ

ನನ್ನನ್ನು ಕುರುಬರೇ ದೂರ ಮಾಡುತ್ತಿದ್ದಾರೆ ಹಾಗೂ ಮುಂದಿನ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿಯೇ ನನ್ನನ್ನು ಸೋಲಿಸುತ್ತಾರಂತೆ. ಐವತ್ತು ವರ್ಷದ ರಾಜಕೀಯ ಜೀವನದಲ್ಲಿ ಇಂಥವರನ್ನು ಸಾಕಷ್ಟು ನೋಡಿದ್ದೇನೆ. ಅವರ ಮಾತಿನಲ್ಲಿ ಸಂಸ್ಕೃತಿಯೇ ಇಲ್ಲ
-ಸಿದ್ದರಾಮಯ್ಯ, ವಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next