ಹೊಸದಿಲ್ಲಿ: ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಅವರು ಇಂದು ಏಮ್ಸ್ ಗೆ ದಾಖಲಾಗಿದ್ದಾರೆ. 61 ವರ್ಷದ ಅವರಿಗೆ ಕಳೆದ ಎಪ್ರಿಲ್ ನಲ್ಲೂ ಕೋವಿಡ್ ಸೋಂಕು ದೃಢವಾಗಿತ್ತು.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಮೇಶ್ ಪೋಖ್ರಿಯಾಲ್ ಅವರನ್ನು ಏಮ್ಸ್ ಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ:ಅರಣ್ಯ ಸಿಬ್ಬಂದಿಗೆ ಲಸಿಕೆ ನೀಡಿದ್ದಕ್ಕೆ ನೋಟಿಸ್ ಜಾರಿಗೊಳಿಸಿದ್ದು ಸರಿನಾ?
ಏಪ್ರಿಲ್ 21ರಂದು ಪೋಖ್ರಿಯಾಲ್ ಅವರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು. ಟ್ವಿಟ್ಟರ್ ಖಾತೆಯ ಮೂಲಕ ಸಚಿವರು ಈ ವಿಚಾರವನ್ನು ದೃಢಪಡಿಸಿದ್ದರು. ಚಿಕಿತ್ಸೆಯ ಬಳಿಕ ಗುಣಮುಖರಾದ ಅವರು ನಂತರ ತನ್ನ ಕೆಲಸಕ್ಕೆ ಮರಳಿದ್ದರು.
ಇದೀಗ ಮತ್ತೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.