Advertisement

ರಮೇಶ್‌ ಭೇಟಿ ಮಾಡಿದ ಪ್ರಸನ್ನಾನಂದ ಸ್ವಾಮೀಜಿ

10:59 PM Jun 05, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಅವರನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Advertisement

ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿ, “ರಮೇಶ್‌ ಹಾಗೂ ಸತೀಶ್‌ ಜಾರಕಿಹೊಳಿ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ನಾನು ಬಂದಿರಲಿಲ್ಲ. ಹಿಂದೆ ಇಬ್ಬರೂ ಸಹೋದರರ ನಡುವೆ ವೈಯಕ್ತಿಕ ಭಿನ್ನಾಭಿಪ್ರಾಯ ಇದ್ದಾಗ ನಾನು ಮಧ್ಯಸ್ಥಿಕೆ ವಹಿಸಿ ಬಗೆಹರಿಸಿದ್ದೆ. ಈಗ ಅವರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಇರುವುದರಿಂದ ನಾನು ಈ ವಿಷಯದಲ್ಲಿ ಮಾತನಾಡುವುದಿಲ್ಲ’ ಎಂದು ಹೇಳಿದರು.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದು, ಗುರುವಾರ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ನಾಯಕರಾಗಿರುವ ರಮೇಶ್‌ ಜಾರಕಿಹೊಳಿಯನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇನೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಜೂ. 9 ರಿಂದ ರಾಜನಹಳ್ಳಿ ಮಹಾಸಂಸ್ಥಾನದಿಂದ ಪಾದಯಾತ್ರೆ ಆರಂಭಿಸಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ, ಜೂ.25ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next