Advertisement

ರಮೇಶ ಆತ್ಮಹತ್ಯೆ ಸಮಗ್ರ ತನಿಖೆ ಆಗಲಿ

12:37 AM Oct 13, 2019 | Lakshmi GovindaRaju |

ಚಿಕ್ಕಮಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ರಮೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

ಈ ಕುರಿತು ಸಮಗ್ರ ತನಿಖೆಯಾದರೆ ಸತ್ಯ ಹೊರಬರುತ್ತದೆ. ಐಟಿ ಅಧಿಕಾರಿಗಳು ಹೇಳಿದ್ದನ್ನು ಎಲ್ಲರೂ ನಂಬಲು ಸಾಧ್ಯವಾಗುವುದಿಲ್ಲ. ರಮೇಶ್‌ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ ಕುರಿತು ನನಗೆ ಮಾಹಿತಿ ಇಲ್ಲ. ಸಾವಿಗೆ ಕಾರಣ ಯಾರೇ ಆದರೂ ಕಾನೂನು ರೀತಿ ಕ್ರಮ ಆಗಬೇಕು ಎಂದರು.

ಕಾನೂನು ಪ್ರಕಾರ ಪ್ರತಿಯೊಂದು ಇಲಾಖೆ ಕುರಿತು ಚರ್ಚಿಸಿ ಬಜೆಟ್‌ಗೆ ಅನುಮೋದನೆ ನೀಡಬೇಕು. ಆದರೆ, ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸಿ ಕೇವಲ ಮೂರು ದಿನಕ್ಕೆ ಅಧಿವೇಶನವನ್ನು ಮೊಟಕುಗೊಳಿಸಿದೆ. ಕಾಂಗ್ರೆಸ್‌ ಪಕ್ಷದ ಮುಂದಿನ ಹೋರಾಟದ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ಸದನಕ್ಕೆ ದೃಶ್ಯ ಮಾಧ್ಯಮದವರಿಗೆ ನಿಷೇಧ ಹೇರಿರುವ ವಿಧಾನಸಭಾಧ್ಯಕ್ಷರ ಆದೇಶ ಕುರಿತು ಸದನದಲ್ಲಿ ಪ್ರಶ್ನೆ ಕೇಳಿದರೂ ವಿಧಾನಸಭಾಧ್ಯಕ್ಷರಾಗಲಿ, ಮುಖ್ಯಮಂತ್ರಿಗಳಾಗಲಿ ಉತ್ತರ ನೀಡಿಲ್ಲ. ತಮ್ಮ ಹುಳುಕುಗಳನ್ನು ಮುಚ್ಚಿಹಾಕಿಕೊಳ್ಳಲು ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next