Advertisement

Rameshwaram Cafe ಸ್ಫೋಟ ನಡೆಸಿದ್ದು ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್: NIA

07:09 PM Apr 05, 2024 | Team Udayavani |

ಬೆಂಗಳೂರು: ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆ ಮುಂದುವರೆದಿದೆ. ಸ್ಫೋಟ ನಡೆಸಿದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ಎನ್ ಐಎ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

Advertisement

ತನಿಖೆಯ ವೇಳೆ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಚಿಕ್ಕಮಗಳೂರಿನ ಕಳಸ ನಿವಾಸಿ ಮುಝಮ್ಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಧಿಸಲಾಗಿದ್ದು ಪೊಲೀಸ್ ಕಸ್ಟಡಿಯಲ್ಲಿಡಲಾಗಿದೆ.ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ, ಎನ್‌ಐಎ ತಂಡಗಳು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. 10 ಲಕ್ಷ ರೂಪಾಯಿಗಳ ಇನಾಮನ್ನೂ ಘೋಷಿಸಿದೆ.

ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಿಸಲು ತಲೆಮರೆಸಿಕೊಂಡಿರುವ, ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸಮಯದ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ.

ಪ್ರಕರಣ ಭಯೋತ್ಪಾದಕ ಘಟನೆಯಾಗಿರುವುದರಿಂದ, ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗಬಹುದು ಹೊರತಾಗಿ ಸಮನ್ಸ್ ಪಡೆದ ವ್ಯಕ್ತಿಗಳನ್ನು ಅಪಾಯಕ್ಕೆ ಒಳಪಡಿಸಬಹುದು. ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತವೆ ಎಂದು ತನಿಖಾ ಸಂಸ್ಥೆ ಹೇಳಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನೂ ಎನ್‌ಐಎ ಕೋರಿದೆ.

Advertisement

Udayavani is now on Telegram. Click here to join our channel and stay updated with the latest news.

Next