Advertisement

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

10:39 PM Jun 16, 2024 | Team Udayavani |

ರಾಮನಗರ: ಡಿಸಿಎಂ ತವರು ಜಿಲ್ಲೆ ರಾಮನಗರದಲ್ಲಿ ಅಂತ್ಯ ಸಂಸ್ಕಾರಕ್ಕೆ ಶ್ಮಶಾನವಿಲ್ಲದೆ ಜನತೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ರವಿವಾರ ತಾಲೂಕಿನ ಕೋನಮುದ್ದನಹಳ್ಳಿ ಗ್ರಾಮದಲ್ಲಿ ಸಾವಿಗೀಡಾದ ವ್ಯಕ್ತಿ ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೆ ಗ್ರಾಮಸ್ಥರು ರಸ್ತೆ ಬದಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Advertisement

ಗ್ರಾಮದ ರುದ್ರಯ್ಯ (60) ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಸ್ವಂತ ಜಮೀನಿಲ್ಲದೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೇ ರಸ್ತೆ ಬದಿಯಲ್ಲಿ ಸಂಸ್ಕಾರ ಮಾಡಿದ್ದಾರೆ.

8 ವರ್ಷಗಳಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ, ಇದುವರೆಗೂ ಶ್ಮಶಾನ ಮಂಜೂರು ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next