Advertisement

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

01:55 AM Dec 29, 2024 | Team Udayavani |

ರಾಮನಗರ: ಜಿಲ್ಲೆಯ ತೆಂಗಿನಕಲ್ಲು ಮತ್ತು ಚಿಕ್ಕಮಣ್ಣುಗಡ್ಡೆ ಪ್ರಾದೇಶಿಕ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇದ್ದ ಸುಮಾರು 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಳೆದೆರಡು ವರ್ಷಗಳಿಂದ ಹಾವಳಿ ಎಬ್ಬಿಸುತ್ತಿದ್ದ ಮಖನಾ ಆನೆಯನ್ನು, ಶನಿವಾರ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದೆ.

Advertisement

ಇದರೊಂದಿಗೆ ಮೊದಲ ಹಂತದ ಆನೆ ಸೆರೆ ಕಾರ್ಯಾಚರಣೆಯಲ್ಲಿ 2 ಕಾಡಾನೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಆನೆ ಶಿಬಿರಕ್ಕೆ ಕಳುಹಿಸಿದೆ. ಡಿ. 20ರಂದು ಸಾಕಾನೆಗಳ ನೆರವಿನಿಂದ ಕಾಡಾನೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದ ಸಿಬಂದಿ, ಕಾರ್ಯಾಚರಣೆ ಆರಂಭಿಸಿದ 2 ತಾಸಿನಲ್ಲಿ ಒಂಟಿಸಲಗವನ್ನು ಸೆರೆ ಹಿಡಿದು ಮತ್ತೀಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಿದ್ದರು. ಈಗ ಸೆರೆ ಸಿಕ್ಕ ಮಖನಾ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸಾಗಿಸಲಾಯಿತು. ಈ ಆನೆಯನ್ನು ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಬಳಸಿಕೊಳ್ಳಲಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

Advertisement

Udayavani is now on Telegram. Click here to join our channel and stay updated with the latest news.

Next