Advertisement

ರಾಮನಗರ: Nikhil Kumaraswamy ಸೋಲಿಗೆ ಬೇಸರಗೊಂಡು ಜೆಡಿಎಸ್ ತಾಲೂಕು ಅಧ್ಯಕ್ಷ ರಾಜೀನಾಮೆ

04:14 PM May 19, 2023 | Team Udayavani |

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಬೇಸರಗೊಂಡು ರಾಮನಗರ ಜೆಡಿಎಸ್​ ತಾಲೂಕು ಅಧ್ಯಕ್ಷ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ.

Advertisement

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಿದ್ದಾರೆ.ಜೆಡಿಎಸ್​ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಸಮರ್ಥ ಯುವನಾಯಕ. ಅವರ ಸೋಲು ನನಗೆ ನುಂಗಲಾರದ ತುತ್ತು. ಆಸೆ, ಆಮಿಷಗಳಿಗೆ ಕ್ಷೇತ್ರದ ಮತದಾರರು ಬಲಿಯಾಗಿದ್ದಾರೆ. ಬೆಳೆಯುತ್ತಿದ್ದ ಸಿರಿಯನ್ನು ಮೊಳಕೆಯಲ್ಲೇ ಚಿವುಟಿದ್ದಾರೆಂದು ಬೇಸರ ವ್ಯಕ್ತಪಡಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇದನ್ನೂ ಓದಿ:Virat Kohli ಶತಕದ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಫಾಫ್: ವಿಡಿಯೋ ನೋಡಿ

ಪಕ್ಷ ಸಂಘಟನೆ ಕಾರ್ಯದಲ್ಲಿ ಸಹಕಾರ ನೀಡಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಅವರು, ಜೆಡಿಎಸ್​ ನಲ್ಲೇ ಇದ್ದು ಪಕ್ಷ ಸಂಘಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಪಕ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ನಿಖಿಲ್ ಸೋಲು ಮನಸ್ಸಿಗೆ ಅತೀವ ನೋವುಂಟು ಮಾಡಿದೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next