Advertisement
ಟೀ ಕುಡಿಯಲು ಹೊರಟಿದ್ದ ಯುವಕರ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾ*ವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದ ಜನತಾ ಕಾಲೋನಿ ಬಳಿ ನಡೆದಿದೆ.ಮೃತ ದುರ್ದೈವಿಗಳು ಮಂಜು(31), ಕಿರಣ್ (30), ಮೂಲತಃ ಮಾಗಡಿ ತಾಲೂಕಿನ ಚೋಳನಾಯಕನಹಳ್ಳಿ ಗ್ರಾಮದವರು. ಎಂದು ತಿಳಿದು ಬಂದಿದೆ. ಬೆಳಗಿನ ಜಾವ 3 ಗಂಟೆಗೆ ಸಮಯದಲ್ಲಿ ಅವಘಡ ನಡೆದಿದೆ.
ಗಾಯಾಳುಗಳಿಗೆ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೈಕ್ ಡಿಕ್ಕಿಯಾಗಿ ಸಿದ್ದಪ್ಪ (45) ಎಂಬ ಪಾದಚಾರಿ ಸ್ಥಳದಲ್ಲೆ ಸಾ*ವನ್ನಪ್ಪಿದ್ದಾರೆ.
ನಡುರಾತ್ರಿ 12.30 ರ ಸಮಯದಲ್ಲಿ ಘಟನೆ ನಡೆದಿದ್ದು, ಬೈಕ್ ಸವಾರ ಮೋಹನ್ ಎಂಬಾತನಿಗೆ ಗಾಯವಾಗಿದ್ದು
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.