Advertisement

ರಾಮನಾಥ ಕೋವಿಂದ್‌ ಗೆಲುವು: ರಾಜ್ಯ ಬಿಜೆಪಿ ಸಂಭ್ರಮಾಚರಣೆ

09:40 AM Jul 21, 2017 | |

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮ್‌ನಾಥ ಕೋವಿಂದ್‌ ಅವರು ಭಾರಿ ಅಂತರದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಬಳಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಸಂಭ್ರಮಾಚರಣೆ ಮಾಡಿದರು.

Advertisement

ಈ ಮಧ್ಯೆ ನೂತನವಾಗಿ ರಾಷ್ಟ್ರಪತಿಯಾಗಲಿರುವ ರಾಮ್‌ನಾಥ ಕೋವಿಂದ್‌ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸೇರಿ ಪಕ್ಷದ ಮುಖಂಡರು ಕೋವಿಂದ್‌ ಅವರಿಗೆ ಅಭಿನಂದನೆ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್‌.ವೀರಯ್ಯ, ಶಾಸಕ ಬಿ.ಎನ್‌. 
ವಿಜಯಕುಮಾರ್‌ ನೇತೃತ್ವದಲ್ಲಿ ನಡೆದ  ಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿದರು.

ಅಭಿನಂದನೆ: ರಾಮ್‌ನಾಥ ಕೋವಿಂದ್‌ ಅವರು ಸಾಮಾನ್ಯ ಕುಟುಂಬಕ್ಕೆ ಸೇರಿದ್ದರೂ ದೇಶದ ಅತ್ಯುನ್ನತ ಸ್ಥಾನ ಅಲಂಕರಿಸುತ್ತಿರುವುದು ದೇಶದ ಸಮಸ್ತ ಜನ ಹೆಮ್ಮೆ ಪಡುವ ಸಂಗತಿ. ಸುಶಿಕ್ಷಿತರಾಗಿರುವ ಅವರು ಸಂವಿಧಾನಕ್ಕೆ ಪೂರಕವಾಗಿ ಕೆಲಸ ಮಾಡುವ ವಿಶ್ವಾಸ ಎಲ್ಲರಿಗೂ ಇದೆ ಎಂದು ಬಿ.ಎಸ್‌.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next